ಟ್ರಂಪ್ ಜೊತೆ ಮಾತನಾಡಿದ ಮಾತ್ರಕ್ಕೆ ಷರೀಫ್ ಗೆ ಪನಾಮದಿಂದ ರಕ್ಷಣೆ ಅಸಾಧ್ಯ: ಇಮ್ರಾನ್ ಖಾನ್
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ದೂರವಾಣಿ ಮೂಲಕ ಮಾತನಾಡಿರುವ ಬಗ್ಗೆ ಪಾಕಿಸ್ತಾನದ ವಿಪಕ್ಷ ನಾಯಕ ಇಮ್ರಾನ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

Published On :
ಇಸ್ಲಾಮಾಬಾದ್: ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ದೂರವಾಣಿ ಮೂಲಕ ಮಾತನಾಡಿರುವ ಬಗ್ಗೆ ಪಾಕಿಸ್ತಾನದ ವಿಪಕ್ಷ ನಾಯಕ ಇಮ್ರಾನ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ನವಾಜ್ ಷರೀಫ್ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಿದ ಮಾತ್ರಕ್ಕೆ ಷರೀಫ್ ಪನಾಮಾ ಪೇಪರ್ ಹಗರಣದಿಂದ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನವಾಜ್ ಷರೀಫ್ ಗೆ ಯಾವುದೇ ವೈಯಕ್ತಿಕ ಲಾಭ ಆಗದೇ ಇದ್ದರೂ, ಡೊನಾಲ್ಡ್ ಟ್ರಂಪ್ ಪ್ರಧಾನಿಯೊಂದಿಗೆ ಮಾತನಾಡಿರುವುದು ಪಾಕಿಸ್ತಾನದ ಮಟ್ಟಿಗೆ ಉತ್ತಮ ಬೆಳವಣಿಗೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಲು ಪ್ರಧಾನಿ ನವಾಜ್ ಷರೀಫ್ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕರೆ ಮಾಡಿ ಮಾತನಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಇಮ್ರಾನ್ ಖಾನ್Imran KhanNawaz Sharifನವಾಜ್ ಷರೀಫ್ಕರೆcallDonald Trumpಡೊನಾಲ್ಡ್ ಟ್ರಂಪ್Panama Papers scandalಪನಾಮ ಪೇಪರ್ಸ್ ಹಗರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


