ವಿದೇಶ

ಕಾಶ್ಮೀರ ಸೇರಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪಾಕ್ ಸಿದ್ಧ: ಪಾಕಿಸ್ತಾನ ರಾಯಭಾರಿ

ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ದ್ವಿಪಕ್ಷೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಿದ್ದು, ಯುದ್ಧವೇ ಎಲ್ಲದಕ್ಕೂ ಆಯ್ಕೆಯಲ್ಲ ಎಂದು ಅಮೆರಿಕದಲ್ಲಿರುವ ಪಾಕ್‌ ರಾಯಭಾರಿ...

ಕಾಶ್ಮೀರ ಸೇರಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪಾಕ್ ಸಿದ್ಧ: ಪಾಕಿಸ್ತಾನ ರಾಯಭಾರಿ
ಅಮೆರಿಕದಲ್ಲಿರುವ ಪಾಕ್‌ ರಾಯಭಾರಿ ಜಲೀಲ್‌ ಅಬ್ಬಾಸ್‌ ಜಿಲಾನಿ
Published On :

ವಾಷಿಂಗ್ಟನ್: ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ದ್ವಿಪಕ್ಷೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಿದ್ದು, ಯುದ್ಧವೇ ಎಲ್ಲದಕ್ಕೂ ಆಯ್ಕೆಯಲ್ಲ ಎಂದು ಅಮೆರಿಕದಲ್ಲಿರುವ ಪಾಕ್‌ ರಾಯಭಾರಿ ಜಲೀಲ್‌ ಅಬ್ಬಾಸ್‌ ಜಿಲಾನಿ ಹೇಳಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎರಡು ದೇಶಗಳಿಗೂ ಆರ್ಥಿಕ ಅಭಿವೃದ್ಧಿಯ ಅಗತ್ಯವಿದೆ. ಯುದ್ಧವೇ ಎಲ್ಲದಕ್ಕೂ ಆಯ್ಕೆಯಲ್ಲ. ಉಭಯ ದೇಶಗಳು ಜನರ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ದುಡಿಯಬೇಕಿದೆ ಎಂದು ಹೇಳಿದ್ದಾರೆ.

ಎರಡು ದೇಶಗಳ ನಡುವಿನ ಯುದ್ಧದ ಬಗ್ಗೆ ಕಲ್ಪನೆಯನ್ನೂ ಮಾಡಿಕೊಳ್ಳಲೂ ಸಾಧ್ಯವಿಲ್ಲ. ಕಾಶ್ಮೀರ ಸೇರಿ ಇನ್ನಿತರೆ ವಿಚಾರಗಳ ಸಂಬಂಧ ಅಂತರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಪಾಕಿಸ್ತಾನ ಸಿದ್ಧವಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.