ಬಿಲ್ ಕ್ಲಿಂಟನ್ ನರಭಕ್ಷಕ, ಮಹಿಳಾ ಪೀಡಕ: ಟ್ರಂಪ್ ವಾಗ್ದಾಳಿ
ಅಮೆರಿಕಾ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಒಬ್ಬ ನರಭಕ್ಷಕ ಹಾಗೂ ಅತಿ ಕೆಟ್ಟ ಮಹಿಳಾ ಪೀಡಕ ಎಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ...

ವಾಷಿಂಗ್ಟನ್; ಅಮೆರಿಕಾ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಒಬ್ಬ ನರಭಕ್ಷಕ ಹಾಗೂ ಅತಿ ಕೆಟ್ಟ ಮಹಿಳಾ ಪೀಡಕ ಎಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.
ಒಂದು ವೇಳೆ ಅವರು ನನ್ನ ವಿರುದ್ಧ ಅಸಮಂಜಸವಾದ ಧ್ವನಿ ಸುರುಳಿ ಮತ್ತು ವಿಡಿಯೋ ಬಿಡುಗಡೆ ಮಾಡಿದರೇ, ನಾನು ಕೂಡ ಬಿಲ್ ಕ್ಲಿಂಟನ್ ಹಾಗೂ ಹಿಲರಿ ಕ್ಲಿಂಟನ್ ವಿರುದ್ಧ ಅನುಚಿತವಾಗಿ ಮಾತನಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಅಂಬ್ರೀಡ್ಜ್ ನ ಪೆನ್ನ್ಸಲ್ವನಿಯಾ ದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯನ್ನು ರಕ್ಷಿಸುತ್ತಿವೆ ಎಂದು ಆರೋಪಿಸಿ ಮಾಧ್ಯಮಗಳ ವಿರುದ್ಧ ಟ್ರಂಪ್ ಹರಿಹಾಯ್ದರು.
ನನ್ನ ವಿರುದ್ದ ವಿಡಿಯೋಗಳನ್ನು ಬಿಡುಗಡೆ ಮಾಡಿದರೇ ನಾನು ಬಿಲ್ ಕ್ಲಿಂಟನ್ ಅವರ ಲೈಂಗಿಕ ಕಿರುಕುಳ ಪ್ರಕರಣಗಳನ್ನು ಬಹಿರಂಗ ಪಡಿಸುತ್ತೇನೆ. ಎಂದು ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮಗಳ ಬೆಂಬಲವಿಲ್ಲದಿದ್ದರೇ 68 ವರ್ಷದ ಹಿಲರಿ ಕ್ಲಿಂಟನ್ ಯಾವುದೇ ಕಾರಣಕ್ಕೂ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


