ದಕ್ಷಿಣ ಚೀನಾ ಸಮುದ್ರದ ವಿಷಯದಲ್ಲಿ ಅಮೆರಿಕ ಮಧ್ಯಪ್ರವೇಶಕ್ಕೆ ಚೀನಾ ಆಕ್ಷೇಪ
ದಕ್ಷಿಣ ಚೀನಾ ಸಮುದ್ರದ ವಿಷಯದಲ್ಲಿ ಮಧ್ಯಪ್ರವೇಶ ಮಾಡುತ್ತಿರುವ ಅಮೆರಿಕವನ್ನು ಚೀನಾ ಖಂಡಿಸಿದ್ದು, ಏಷ್ಯಾದ ಸೂಕ್ಷ್ಮ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಸಿದೆ.

ಬೀಜಿಂಗ್:ದಕ್ಷಿಣ ಚೀನಾ ಸಮುದ್ರದ ವಿಷಯದಲ್ಲಿ ಮಧ್ಯಪ್ರವೇಶ ಮಾಡುತ್ತಿರುವ ಅಮೆರಿಕವನ್ನು ಚೀನಾ ಖಂಡಿಸಿದ್ದು, ಏಷ್ಯಾದ ಸೂಕ್ಷ್ಮ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಸಿದೆ.
ವಿವಾದಿತ ದಕ್ಷಿಣ ಚೀನಾ ಸಮುದ್ರದ ಪ್ರದೇಶದಲ್ಲಿ ಚೀನಾ ನಿರ್ಮಿಸಿರುವ ದ್ವೀಪದಲ್ಲಿ ಅಮೆರಿಕ ನೌಕಾ ಕಾರ್ಯಾಚರಣೆ ನಡೆಸಿ, ವಿವಾದಿತ ಸಮುದ್ರದ ಬಳಿ ಇರುವ ದಕ್ಷಿಣ ಕೊರಿಯಾದಲ್ಲಿ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜಿಸುವುದಕ್ಕೆ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಚೀನಾ ಆಕ್ಷೇಪ ವ್ಯಕ್ತಪಡಿಸಿದ್ದು ಏಷ್ಯಾದ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಸೂಚಿಸಿದೆ. ಕೆಲವು ರಾಷ್ಟ್ರಗಳು ಮಿಲಿಟರಿ ಸಂಬಂಧಗಳನ್ನು ಬಲಪಡಿಸಿಕೊಂಡು ಬೇರೆ ರಾಷ್ಟ್ರಗಳ ಹಿತಾಸಕ್ತಿಯ ವಿರುದ್ಧವಾಗಿ ತನ್ನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುತ್ತಿವೆ ಎಂದು ಚೀನಾದ ರಕ್ಷಣಾ ಸಚಿವರು ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದಾರೆ. ಬರಾಕ್ ಒಬಾಮ ನೇತೃತ್ವದಲ್ಲಿ ಅಮೆರಿಕ ಮಿಲಿಟರಿ, ಆರ್ಥಿಕ ಸಂಬಂಧಗಳನ್ನು ಬಲಪಡಿಸಿಕೊಂಡು ಏಷ್ಯಾದಲ್ಲಿ ಪ್ರಾಬಲ್ಯ ಮೆರೆಯಲು ಯತ್ನಿಸುತ್ತಿದ್ದು ಇದು ಚೀನಾಗೆ ಆತಂಕಕಾರಿ ಎಂದು ಚೀನಾ ರಕ್ಷಣಾ ಸಚಿವರು ಹೇಳಿದ್ದಾರೆ.
ದಕ್ಷಿಣ ಚೀನಾ ಸಮುದ್ರದ ವಿವಾದಲ್ಲಿ ವಿಶ್ವಸಂಸ್ಥೆಯ ನ್ಯಾಯಮಂಡಳಿ ಚೀನಾ ವಿರುದ್ಧವಾಗಿ ತೀರ್ಪು ನೀಡಿದ್ದು, ದಕ್ಷಿಣ ಚೀನಾ ಸಮುದ್ರದ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ವಿವಾದಿತ ಸಮುದ್ರದ ಪ್ರದೇಶಗಳಲ್ಲಿ ಹಕ್ಕು ಪ್ರತಿಪಾದನೆ ಮಾಡುತ್ತಿಯುವ ಫಿಲಿಫೇನ್ಸ್ ಸೇರಿದಂತೆ ಹಲವು ರಾಷ್ಟ್ರಗಳಿಗೆ ಅಮೆರಿಕ ಬೆಂಬಲ ವ್ಯಕ್ತಪಡಿಸಿಟ್ಟಿದೆ. ಈ ಹಿನ್ನೆಲೆಯಲ್ಲಿ ಚೀನಾ ಅಮೆರಿಕ ಮಧ್ಯ ಪ್ರವೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


