ಭಾರತದೊಂದಿಗೆ ಪೈಪೋಟಿ, ಬಾಂಗ್ಲಾದೇಶಕ್ಕೆ 24 ಬಿಲಿಯನ್ ಡಾಲರ್ ಸಾಲ ನೀಡಲಿರುವ ಚೀನಾ
ಬಾಂಗ್ಲಾದೇಶದ ಮೇಲೆ ಭಾರತ ಹೊಂದಿರುವ ಪ್ರಭಾವವನ್ನು ತಗ್ಗಿಸಿ, ಭಾರತದ ನೆರೆ ರಾಷ್ಟ್ರವನ್ನು ತನ್ನತ್ತ ಸೆಳೆದುಕೊಳ್ಳಲು ಯತ್ನಿಸುತ್ತಿರುವ ಚೀನಾ ಬಾಂಗ್ಲಾದೇಶಕ್ಕೆ 24 ಬಿಲಿಯನ್ ಡಾಲರ್ ಸಾಲ ನೀಡಲು ಸಿದ್ಧವಾಗಿದೆ.

ಢಾಕಾ: ಬಾಂಗ್ಲಾದೇಶದ ಮೇಲೆ ಭಾರತ ಹೊಂದಿರುವ ಪ್ರಭಾವವನ್ನು ತಗ್ಗಿಸಿ, ಭಾರತದ ನೆರೆ ರಾಷ್ಟ್ರವನ್ನು ತನ್ನತ್ತ ಸೆಳೆದುಕೊಳ್ಳಲು ಯತ್ನಿಸುತ್ತಿರುವ ಚೀನಾ ಬಾಂಗ್ಲಾದೇಶಕ್ಕೆ 24 ಬಿಲಿಯನ್ ಡಾಲರ್ ಸಾಲ ನೀಡಲು ಸಿದ್ಧವಾಗಿದೆ.
ಬ್ರಿಕ್ಸ್ ಸಮ್ಮೇಳನದಲ್ಲಿ ಭಾಗವಹಿಸಲು ಗೋವಾಗೆ ಆಗಮಿಸುತ್ತಿರುವ ಚೀನಾ ಅಧ್ಯಕ್ಷ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಮಾರ್ಗ ಮಧ್ಯದಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದು, 24 ಬಿಲಿಯನ್ ಡಾಲರ್ ಸಾಲ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
30 ವರ್ಷಗಳಲ್ಲಿ ಇದೆ ಮೊದಲ ಬಾರಿಗೆ ಚೀನಾ ಅಧ್ಯಕ್ಷರು ಬಾಂಗ್ಲಾದೇಶಕ್ಕೆ ಭೇಟಿ ನೀಡುತ್ತಿದ್ದು, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೂಲಸೌಕರ್ಯಅಭಿವೃದ್ಧಿ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಭಾರತಕ್ಕೆ ಪೈಪೋಟಿ ನೀಡಲು ಯತ್ನಿಸುತ್ತಿದೆ. ಭಾರತ ಈಗಾಗಲೇ ಬಾಂಗ್ಲಾದೇಶದಲ್ಲಿ ಹಲವು ಮೂಲಸೌಕರ್ಯ ಯೋಜನೆಗಳಲ್ಲಿ ಪಾಲುದಾರಿಕೆ ಹೊಂದಿದೆ. ಭಾರತದ ಪ್ರಭಾವದಿಂದ ಜಪಾನ್ ಸಹ ಬಾಂಗ್ಲಾದೇಶದಲ್ಲಿ ಹಲವು ಯೋಜನೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಭಾವವನ್ನು ಕಡಿಮೆ ಮಾಡಲು ಚೀನಾ ಬಾಂಗ್ಲಾದೇಶಕ್ಕೆ ಹೆಚ್ಚಿನ ಸಾಲ ನೀಡಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


