ವಿದೇಶ

'ಭಯೋತ್ಪಾದನೆಯ ಮಾತೃಭೂಮಿ ಪಾಕಿಸ್ತಾನ': ಮೋದಿ ಹೇಳಿಕೆಗೆ ಪಾಕ್ ಕಿಡಿ

ಭಯೋತ್ಪಾದನೆ ವಿಚಾರವಿಟ್ಟುಕೊಂಡು ಪಾಕಿಸ್ತಾನದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಭಾರತಕ್ಕೆ ಇಲ್ಲ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್...

'ಭಯೋತ್ಪಾದನೆಯ ಮಾತೃಭೂಮಿ ಪಾಕಿಸ್ತಾನ': ಮೋದಿ ಹೇಳಿಕೆಗೆ ಪಾಕ್ ಕಿಡಿ
ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್
Published On :

ಇಸ್ಲಾಮಾಬಾದ್: ಭಯೋತ್ಪಾದನೆ ವಿಚಾರವಿಟ್ಟುಕೊಂಡು ಪಾಕಿಸ್ತಾನದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಭಾರತಕ್ಕೆ ಇಲ್ಲ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ಅವರು ಹೇಳಿದ್ದಾರೆ,

ಗೋವಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದರು. ಪಾಕಿಸ್ತಾನ ರಾಷ್ಟ್ರ ಭಯೋತ್ಪಾದಕನೆಯ ಮಾತೃಭೂಮಿಯಾಗಿದ್ದು, ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿರುವ ಹಾಗೂ ಬೆಂಬಲ ನೀಡುತ್ತಿರುವ ರಾಷ್ಟ್ರವನ್ನು ಪ್ರತ್ಯೇಕಗೊಳ್ಳುವಂತೆ ಮಾಡಬೇಕು. ಭಯೋತ್ಪಾದನೆ ಕುರಿತಂತೆ ಬ್ರಿಕ್ಸ್ ರಾಷ್ಟ್ರಗಳು ಒಂದುಗೂಡಿ ಹೋರಾಟ ನಡೆಸಬೇಕಿದೆ ಎಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸರ್ತಾಜ್ ಅಜೀಜ್ ಅವರು, ಬ್ರಿಕ್ಸ್ ಶೃಂಗಸಭೆ ಹಾಗೂ ಬಿಮ್ ಸ್ಟೆಕ್ ಸಮಾವೇಶದಲ್ಲಿ ಪಾಕಿಸ್ತಾನವನ್ನು 'ಭಯೋತ್ಪಾದನಾ ಮಾತೃಭೂಮಿ' ಎಂದು ಹೇಳುವ ಮೂಲಕ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿವಿಧ ರಾಷ್ಟ್ರಗಳ ನಾಯಕರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನಗಳನ್ನು ಪ್ರಧಾನಿ ಮೋದಿಯವರು ಮಾಡುತ್ತಿದ್ದಾರೆಂದು ಹೇಳಿದ್ದಾರೆ.

ಈ ರೀತಿಯ ಹೇಳಿಕೆಗಳ ಮೂಲಕ ಭಾರತೀಯ ನಾಯಕ ಕಾಶ್ಮೀರದಲ್ಲಿ ನಡೆಯುತ್ತಿರುವ ವಿಕೃತತೆ ಹಾಗೂ ಹಿಂಸಾಚಾರಗಳನ್ನು ವಿಶ್ವದೆದುರು ಮರೆಮಾಚಲು ಯತ್ನಿಸುತ್ತಿದ್ದಾರೆ. ಕಾಶ್ಮೀರಕ್ಕಾಗಿ ಹೋರಾಡುತ್ತಿರುವವರನ್ನು ಭಯೋತ್ಪಾದಕರೆಂದು ವಿಭಾಗಿಸಬಾರದು ಎಂದು ಈ ಹಿಂದೆ ವಿಶ್ವಸಂಸ್ಥೆಯೇ ಹೇಳಿದೆ. ಆದರೂ, ಭಾರತ ಮಾತ್ರ ಪಾಕಿಸ್ತಾನ ವಿರುದ್ಧ ಆರೋಪಗಳ ಮೇಲೆ ಆರೋಪಗಳನ್ನು ಮಾಡುತ್ತಲೇ ಇದೆ, ಭಾರತದ ಹಸ್ತಕ್ಷೇಪ ಹಾಗೂ ವಿಧ್ವಂಸಕ ಕೃತ್ಯಗಳಿಗೆ ಪಾಕಿಸ್ತಾನ ಬಲಿಪಶುವಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.