ಕೊಲೆ ಆರೋಪ ಸಾಬೀತು: ಸೌದಿ ಯುವರಾಜನಿಗೆ ಮರಣ ದಂಡನೆ
ವ್ಯಕ್ತಿಯೊಬ್ಬನ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ರಾಜ ಮನೆತನದ ಯುವರಾಜನಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ....

ರಿಯಾದ್: ವ್ಯಕ್ತಿಯೊಬ್ಬನ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ರಾಜ ಮನೆತನದ ಯುವರಾಜನಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಯುವರಾಜ ತುರ್ಕಿ ಬಿನ್ ಸೌದ್ ಅಲ್ ಕಬೀರ್ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದಾರೆ.
ಸೌದಿಯ ಯುವರಾಜ ತನ್ನ ಸ್ನೇಹಿತನನ್ನು ಹತ್ಯೆ ಮಾಡಿದ ಆರೋಪ ಸಾಬೀತಾಗಿದೆ ಎಂದು ಯುವರಾಜನ ಹೆಸರನ್ನು ನಮೂದಿಸದೆ ನವೆಂಬರ್ 2014ರಲ್ಲಿ ಅರಬ್ನ ಪತ್ರಿಕೆಯೊಂದು ವರದಿ ಮಾಡಿತ್ತು.
ರಿಯಾದ್ ನಲ್ಲಿ ಡೆಸರ್ಟ್ ಕ್ಯಾಂಪ್ ಗಳು ನಡೆಯುವುದು ಸಾಮಾನ್ಯ. 2012ರ ಡಿಸೆಂಬರ್ನಲ್ಲಿ ರಿಯಾದ್ ಸಮೀಪದ ಕ್ಯಾಂಪ್ನಲ್ಲಿ ಯುವರಾಜ ಮತ್ತು ಆತನ ಸ್ನೇಹಿತನ ನಡುವೆ ವಾಗ್ವಾದ ನಡೆದಿತ್ತು. ಆ ನಂತರ ಯುವರಾಜ ಆತನಿಗೆ ಗುಂಡಿಟ್ಟು ಹತ್ಯೆ ಮಾಡಿದ್ದ ಮತ್ತು ಮತ್ತೋರ್ವನಿಗೆ ಗುಂಡೇಟು ತಗುಲಿತ್ತು. ನಂತರ ಹತ್ಯೆಗೀಡಾದ ವ್ಯಕ್ತಿ ತನ್ನ ಸ್ನೇಹಿತ ಎಂದು ಯುವರಾಜನೇ ಪೊಲೀಸರಿಗೆ ಮಾಹಿತಿ ನೀಡಿದ್ದ.
ಸೌದಿ ಅರೇಬಿಯಾದಲ್ಲಿ ನ್ಯಾಯಾಂಗ ವ್ಯವಸ್ಥೆ ಕಟ್ಟುನಿಟ್ಟಾಗಿದ್ದು, 2015ರಲ್ಲಿ 158 ಜನರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಈ ವರ್ಷ ಇದುವರೆಗೂ 134 ಜನರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


