ಕರಾಚಿ: ಪತ್ರಕರ್ತೆಗೆ ಪೇದೆಯಿಂದ ಕಪಾಳ ಮೋಕ್ಷ; ವಿಡಿಯೋ ವೈರಲ್
ಮಹಿಳಾ ಪತ್ರಕರ್ತೆಗೆ ಪೊಲೀಸ್ ಪೇದೆ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.

ಕರಾಚಿ: ಮಹಿಳಾ ಪತ್ರಕರ್ತೆಗೆ ಪೊಲೀಸ್ ಪೇದೆ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.
ಕೆ-21 ನ್ಯೂಸ್ ಚಾನಲ್‌ನ ಸೈಮಾ ಕನ್ವಾಲ್ ಕರಾಚಿಯ ನದ್ರಾ ನೋಂದಣಿ ಕಚೇರಿಯಲ್ಲಿ ವರದಿ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ನದ್ರಾ ನೋಂದಣಿ ಕಚೇರಿ ಸಿಬ್ಬಂದಿಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವರದಿ ಮಾಡಲು ಸೈಮಾ ತೆರಳಿದ್ದರು. ಈ ವೇಳೆ ಓರ್ವ ಪೇದೆಯನ್ನು ಮಾತನಾಡಿಸಲು ಯತ್ನಿಸಿದಾಗ ಆತ ಕುಪಿತಗೊಂಡಿದ್ದಾನೆ. ಮೊದಲು ರಿಪೋರ್ಟ್ ಮಾಡುವುದನ್ನು ನಿಲ್ಲಿಸಲು ಪೊಲೀಸ್ ಹೇಳಿದ್ದಾನೆ. ಬಳಿಕ ಕ್ಯಾಮರಾಮನ್ ಶೂಟ್ ಮಾಡುವುದನ್ನು ತಡೆಯಲು ಯತ್ನಿಸಿದ್ದಾನೆ. ಮಾಧ್ಯಮ ತನ್ನ ಕೆಲಸ ನಿರ್ವಹಿಸಲು ಅಡ್ಡಿ ಪಡಿಸುತ್ತಿರುವುದನ್ನು ಸೆರೆ ಹಿಡಿಯುವಂತೆ ಪತ್ರಕರ್ತೆ ತಿಳಿಸಿದ್ದಾರೆ. ಇದರಿಂದ ಮತ್ತಷ್ಟು ಕುಪಿತಗೊಂಡ ಪೇದೆ ಸಾರ್ವಜನಿಕವಾಗಿ ಆಕೆಯ ಕೆನ್ನೆಗೆ ಬಾರಿಸಿದ್ದಾನೆ,
ವರದಿಗಾರ್ತಿ ಮೇಲೆ ಹಲ್ಲೆ ಮಾಡಿರುವ ಕುರಿತು ಗುಲ್‌ಬಾಹರ್ ಪೊಲೀಸರು ಪೇದೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನೋಂದಣಾಧಿಕಾರಿಗಳು ಕರ್ತವ್ಯ ನಿರ್ವಹಣೆಗೆ ಅಡ್ಡಿ ಆರೋಪದಲ್ಲಿ ಟಿವಿ ಚಾನೆಲ್ ವಿರುದ್ಧ ಕೇಸು ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


