ವಿದೇಶ

ಜಪಾನ್ ಉದ್ಯಾನವನದಲ್ಲಿ ಸರಣಿ ಸ್ಫೋಟ: ಮೂವರಿಗೆ ಗಾಯ, ಓರ್ವ ಸಾವು

ಜಪಾನ್ ರಾಷ್ಟ್ರದ ಉದ್ಯಾನವನದಲ್ಲಿ ಸರಣಿ ಸ್ಫೋಟವೊಂದು ಸಂಭವಿಸಿದ್ದು, ಪರಿಣಾಮ ಮೂವರು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ...

ಜಪಾನ್ ಉದ್ಯಾನವನದಲ್ಲಿ ಸರಣಿ ಸ್ಫೋಟ: ಮೂವರಿಗೆ ಗಾಯ, ಓರ್ವ ಸಾವು
ಜಪಾನ್ ಉದ್ಯಾನವನದಲ್ಲಿ ಸರಣಿ ಸ್ಫೋಟ: ಮೂವರಿಗೆ ಗಾಯ, ಓರ್ವ ಸಾವು
Published On :

ಜಪಾನ್: ಜಪಾನ್ ರಾಷ್ಟ್ರದ ಉದ್ಯಾನವನದಲ್ಲಿ ಸರಣಿ ಸ್ಫೋಟವೊಂದು ಸಂಭವಿಸಿದ್ದು, ಪರಿಣಾಮ ಮೂವರು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಉತ್ತರ ಟೋಕಿಯೋಯಿಂದ 100 ಕಿ.ಮೀ ದೂರದಲ್ಲಿರುವ ಉತ್ಸುನೊಮಿಯಾ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ 11.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾಯಗೊಂಡಿರುವ ಮೂವರ ಪೈಕಿ ಓರ್ವವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿತ್ತು. ಇದೀಗ ಆ ವ್ಯಕ್ತಿ ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಉದ್ಯಾನವನದಲ್ಲಿರುವ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ಮೂಲ ಕಾರಣಗಳು ಈ ವರೆಗೂ ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.