ಭಾರಿ ಪ್ರಮಾಣದ ಸ್ಫೋಟಕ ತುಂಬಿದ್ದ ಪಾಕ್ ಟ್ರಕ್ ವಶಕ್ಕೆ ಪಡೆದ ಆಫ್ಘನ್ ಸೇನೆ!
1000 ಕೆ.ಜಿ ಸ್ಫೋಟಕಗಳನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನ ಮೂಲದ ಟ್ರಕ್'ವೊಂದನ್ನು ಅಫ್ಘಾನಿಸ್ತಾನ ಸೇನೆ ವಶಕ್ಕೆ ಪಡೆದುಕೊಂಡಿದೆ ಎಂದು ಸೋಮವಾರ ಮೂಲಗಳಿಂದ...

ಕಾಬುಲ್: 1000 ಕೆ.ಜಿ ಸ್ಫೋಟಕಗಳನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನ ಮೂಲದ ಟ್ರಕ್'ವೊಂದನ್ನು ಅಫ್ಘಾನಿಸ್ತಾನ ಸೇನೆ ವಶಕ್ಕೆ ಪಡೆದುಕೊಂಡಿದೆ ಎಂದು ಸೋಮವಾರ ಮೂಲಗಳಿಂದ ತಿಳಿದುಬಂದಿದೆ.
ಈ ಕುರಿತಂತೆ ಅಫ್ಘಾನಿಸ್ತಾನ ರಾಷ್ಟ್ರದ ಆಂತರಿಕ ಸಚಿವಾಲಯ ಖಚಿತ ಮಾಹಿತಿ ನೀಡಿದ್ದು, ಭಾರೀ ಪ್ರಮಾಣದ ಸ್ಫೋಟಕಗಳನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನ ಮೂಲದ ಟ್ರಕ್ ವೊಂದನ್ನು ಅಫ್ಘಾನಿಸ್ತಾನ ಸೇನೆ ವಶಕ್ಕೆ ಪಡೆದುಕೊಂಡಿದೆ. ಟ್ರಕ್ ನಲ್ಲಿ ಪಾಕಿಸ್ತಾನದ ಇಬ್ಬರು ಪ್ರಜೆಗಳು ಸೇರಿದಂದೆ ಮೂವರು ಪ್ರಯಾಣ ಮಾಡುತ್ತಿದ್ದರು ಎಂದು ಹೇಳಿಕೊಂಡಿದೆ.
ಭಯೋತ್ಪಾದಕರಿಗೆ ಪಾಕಿಸ್ತಾನ ರಾಷ್ಟ್ರ ಆಶ್ರಯತಾಣವಾಗಿ ನಿರ್ಮಾಣವಾಗಿದೆ ಈ ಹಿಂದಿನಿಂದಲೂ ಆಫ್ಘಾನಿಸ್ತಾನ ಹೇಳುತ್ತಲೇ ಬಂದಿದೆ. ಆಫ್ಘಾನಿಸ್ತಾನದ ಆರೋಪಗಳನ್ನು ತಳ್ಳಿಹಾಕುತ್ತಲೇ ಬಂದಿರುವ ಪಾಕಿಸ್ತಾನ ಅಫ್ಘಾನಿಸ್ತಾನದ ಮೇಲೆ ದ್ವೇಷ ಸಾಧಿಸುತ್ತಲೇ ಬರುತ್ತಿದ್ದು, ಆಫ್ಘಾನಿಸ್ತಾನದಲ್ಲಿ ಉಗ್ರ ದಾಳಿಗಳನ್ನು ನಡೆಸುತ್ತಲೇ ಇದೆ. ಟ್ರಕ್ ನಲ್ಲಿ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ದೊರಕಿರುವುದು ಇದೀಗ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಆಫ್ಘಾನಿಸ್ತಾನ ರಾಷ್ಟ್ರದಲ್ಲಿ ಉಗ್ರರು ದೊಡ್ಡ ಮಟ್ಟದಲ್ಲೇ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿರುವುದು ಇದರಿಂದ ಬಹಿರಂಗಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


