ಇರಾಕ್ ದಾಳಿ ಅಂತ್ಯ, 74 ಐಎಸ್ ಉಗ್ರರ ಹತ್ಯೆ: ಗವರ್ನರ್
ಇರಾಕ್ ನ ಕಿರ್ಕುಕ್ ನಗರದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಇರಾಕಿ...

Published On :
ಕಿರ್ಕುಕ್: ಇರಾಕ್ ನ ಕಿರ್ಕುಕ್ ನಗರದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಇರಾಕಿ ಭದ್ರತಾ ಪಡೆಗಳು ಸೋಮವಾರ ಅಂತ್ಯಗೊಳಿಸಿದ್ದು, ಕಳೆದ ಮೂರು ದಿನಗಳಲ್ಲಿ ಕನಿಷ್ಠ 74 ಜಿಹಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪ್ರಾಂತೀಯ ಗರ್ವನರ್ ತಿಳಿಸಿದ್ದಾರೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಈಗ ಜನಜೀವನ ಸಹಜ ಸ್ಥಿತಿಗೆ ಮರಳಿದೆ ಎಂದು ಕಿರ್ಕುಕ್ ಪ್ರಾಂತ್ಯದ ಗವರ್ನರ್ ನಜ್ಮೆದ್ದಿನ್ ಕರಿಮ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಸುಮಾರು 74 ಐಎಸ್ ಉಗ್ರರನ್ನು ಹತ್ಯೆ ಮಾಡಿದ್ದಾರೆ ಮತ್ತು ಐಎಸ್ ಸಂಘಟನೆಯ ನಾಯಕರು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


