ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ಬಸ್ ಚಾಲಕ ಸಜೀವ ದಹನ
ಪ್ರಯಾಣಿಕರ ಎದುರೇ ವ್ಯಕ್ತಿಯೊಬ್ಬ ಭಾರತೀಯ ಮೂಲದ 29 ವರ್ಷದ ಬಸ್ ಚಾಲಕನ ಮೇಲೆ ಲಿಖ್ವಿಡ್ ಸುರಿದು ಬೆಂಕಿ ಹಚ್ಚಿದ...

Published On :
ಮೆಲ್ಬೋರ್ನ್: ಪ್ರಯಾಣಿಕರ ಎದುರೇ ವ್ಯಕ್ತಿಯೊಬ್ಬ ಭಾರತೀಯ ಮೂಲದ 29 ವರ್ಷದ ಬಸ್ ಚಾಲಕನ ಮೇಲೆ ಲಿಖ್ವಿಡ್ ಸುರಿದು ಬೆಂಕಿ ಹಚ್ಚಿದ ಘಟನೆ ಶುಕ್ರವಾರ ಆಸ್ಟ್ರೇಲಿಯಾದ ಬ್ರಿಸ್ಬೇನ್ ನಗರದಲ್ಲಿ ನಡೆದಿದೆ.
ಬ್ರಿಸ್ಬೇನ್ ಸಿಟಿ ಕೌನ್ಸಿಲ್ ಬಸ್ ಚಾಲಕನಾಗಿದ್ದ ಭಾರತೀಯ ಮೂಲದ ಮನ್ಮೀತ್ ಅಲಿಶೇರ್ ಮೇಲೆ ದಷ್ಕರ್ಮಿಯೊಬ್ಬ ಲಿಖ್ವಿಡ್ ಸುರಿದು ಬೆಂಕಿ ಹಚ್ಚಿದ್ದಾನೆ.
ಪಂಜಾಬಿ ಸಮುದಾಯದಲ್ಲಿ ಒಬ್ಬ ಗಾಯಕನಾಗಿ ಚೆನ್ನಾಗಿ ಗುರುತಿಸಿಕೊಂಡಿದ್ದ ಅಲಿಶೇರ್ ಸ್ಥಳದಲ್ಲಿಯೇ ಸಜೀವ ದಹನವಾಗಿದ್ದು, ಹಲವು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಆರು ಪ್ರಯಾಣಿಕರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ 48 ವರ್ಷದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಲಾನ್ ಸ್ಟೀವಾರ್ಟ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


