ಮಸೂದ್ ಅಜರ್ ಓರ್ವ ಭಯೋತ್ಪಾದಕ: ಪರ್ವೇಜ್ ಮುಷರಫ್
ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ದೇಶದಲ್ಲಿ ನಡೆದ ಸಾಕಷ್ಟು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆತನೊಬ್ಬ ಭಯೋತ್ಪಾದಕನಾಗಿದ್ದಾನೆಂದು ಮಾಜಿ ಪಾಕಿಸ್ತಾನ ಪ್ರಧಾನಮಂತ್ರಿ ಪರ್ವೇಜ್ ಮುಷರಫ್...

ಇಸ್ಲಾಮಾಬಾದ್: ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ದೇಶದಲ್ಲಿ ನಡೆದ ಸಾಕಷ್ಟು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆತನೊಬ್ಬ ಭಯೋತ್ಪಾದಕನಾಗಿದ್ದಾನೆಂದು ಮಾಜಿ ಪಾಕಿಸ್ತಾನ ಪ್ರಧಾನಮಂತ್ರಿ ಪರ್ವೇಜ್ ಮುಷರಫ್ ಅವರು ಹೇಳಿದ್ದಾರೆ.
ಪಾಕಿಸ್ತಾನ ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿರುವ ಅವರು, ಮಸೂದ್ ಅಜರ್ ಪಾಕಿಸ್ತಾನದಲ್ಲಿ ನಡೆದ ಸಾಕಷ್ಟು ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆತನೊಬ್ಬ ಭಯೋತ್ಪಾದನಾಗಿದ್ದಾನೆಂದು ಹೇಳಿದ್ದಾರೆ.
ಜೈಶ್-ಇ-ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮತ್ತು ಪಠಾಣ್ ಕೋಟ್ ದಾಳಿಯ ಪ್ರಮುಖ ರೂವಾರಿ ಮಸೂದ್ ಅಜರ್ ಉಗ್ರಗಾಮಿಯೆಂದು ಘೋಷಿಸುವಂತೆ ಭಾರತ ನಡೆಸುತ್ತಿರುವ ಯತ್ನಗಳಿಗೆ ಚೀನಾ ಅಡ್ಡಗಾಲು ಹಾಕುತ್ತಿದೆ. ಕೆಲ ದಿನಗಳ ಹಿಂದಷ್ಟೇ ಮತ್ತದೇ ವಿತಂಡ ವಾದವನ್ನು ಮಂಡಿಸಿದ್ದ ಚೀನಾ, ಮಸೂದ್ ಅಜರ್ ನನ್ನು ಭಯೋತ್ಪಾದನೆಂದು ಘೋಷಣೆ ಮಾಡಲು ವಿರೋಧ ವ್ಯಕ್ತಪಡಿಸಿತ್ತು.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮುಷರಫ್ ಅವರು, ಮಸೂದ್ ಅಜರ್ ವಿಚಾರದಲ್ಲಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಿರುವಾಗ ಈ ವಿಚಾರದಲ್ಲಿ ಚೀನಾ ಏಕೆ ಭಾಗಿಯಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿಗಳು ಬೇಹುಗಾರಿಕೆ ನಡೆಸಿರುವ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಈ ವಿಚಾರದ ಬಗ್ಗೆ ನನಗೆ ಸರಿಯಾದ ಮಾಹಿತಿಯಿಲ್ಲ. ಒಂದು ವೇಳೆ ಬೇಹುಗಾರಿಕೆ ನಡೆದಿದ್ದೇ ಆದರೆ, ಇಂತಹ ನಡೆಯನ್ನು ಪ್ರೋತ್ಸಾಹಿಸಬಾರದು ಎಂದು ಹೇಳಿದ್ದಾರೆ.
ಪಾಕಿಸ್ತಾನ ಸರ್ಕಾರದ ರಾಜತಾಂತ್ರಿಕತೆ ಅಂತರಾಷ್ಟ್ರೀಯ ಮಟ್ಟದಲ್ಲಿ ವೈಫಲತೆಯನ್ನು ಕಾಣುತ್ತಿದೆ. ಹಾಗೆಂದ ಮಾತ್ರಕ್ಕೆ ಪಾಕಿಸ್ತಾನವನ್ನು ದುರ್ಬಳಕೆ ಮಾಡಿಕೊಳ್ಳಬಹುದು ಎಂಬ ಆಲೋಚನೆಯನ್ನು ಯಾರೂ ಮಾಡಬಾರದು. ಸೇನೆ ಬಲ ಶಕ್ತಿಯುತವಾಗಿದ್ದಾಗ ಪಾಕಿಸ್ತಾನ ಸಾಕಷ್ಟು ಅಭಿವೃದ್ಧಿಯನ್ನು ಕಂಡಿತ್ತು ಎಂದು ಹೇಳಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರ ನೆಲೆಗಳ ಬಗ್ಗೆ ಮಾತನಾಡಿರುವ ಅವರು, ಉಗ್ರ ನೆಲೆಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆಂದು ಹೇಳಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಮಾತನಾಡಿರುವ ಅವರು, ಪಾಕಿಸ್ತಾನ ರಾಷ್ಟ್ರ ಪರಮಾಣು ಶಕ್ತಿ ಹಾಗೂ ಬಲವಾದ ಸೇನೆಯನ್ನು ಹೊಂದಿರುವ ರಾಷ್ಟ್ರವಾಗಿದ್ದು, ನಮ್ಮನ್ನು ಅಷ್ಟು ಸುಲಭವಾಗಿ ತೆಗೆದುಕೊಳ್ಳಬಾರದು ಎಂದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರಿ ಮೋದಿಯವರು ಪಾಕಿಸ್ತಾನಕ್ಕೆ ಭೇಟಿ ನೀಡಿ ಶರೀಫ್ ಅವರನ್ನು ಭೇಟಿಯಾಗಿರುವುದರ ಬಗ್ಗೆ ಮಾತನಾಡಿ, ಹಸ್ತಲಾಘವವೊಂದು ಕೇವಲ ತೋರಿಕೆಯ ನಡೆಯಷ್ಟೇ. ಉಭಯ ದೇಶಗಳ ನಡುವಿನ ಸಮಸ್ಯೆಗಳಿಗೆ ಸೂಕ್ತ ರೀತಿಯ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


