ಕಾಲ್ ಸೆಂಟರ್ ಹಗರಣ: 32 ಭಾರತೀಯರ ವಿರುದ್ಧ ಅಮೇರಿಕಾದಲ್ಲಿ ಚಾರ್ಜ್ ಶೀಟ್
ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದ 5 ಕಾಲ್ ಸೆಂಟರ್ ಗಳ ವಿರುದ್ಧ ಅಮೆರಿಕದ ಸಂತ್ರಸ್ತರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಅಲ್ಲಿನ ನ್ಯಾಯಾಂಗ ಅಧಿಕಾರಿಗಳು ಕಾಲ್ ಸೆಂಟರ್ ಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.

ವಾಷಿಂಗ್ ಟನ್: ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದ 5 ಕಾಲ್ ಸೆಂಟರ್ ಗಳ ವಿರುದ್ಧ ಅಮೆರಿಕದ ಸಂತ್ರಸ್ತರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಅಲ್ಲಿನ ನ್ಯಾಯಾಂಗ ಅಧಿಕಾರಿಗಳು ಕಾಲ್ ಸೆಂಟರ್ ಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.
ಅಮೆರಿಕದಲ್ಲಿರುವ ದಕ್ಷಿಣ ಏಷ್ಯಾದ ಸಂತ್ರಸ್ತರಿಗೆ ಅಮೆರಿಕದ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿದ್ದ ಕಾಲ್ ಸೆಂಟರ್, ನ ಸಿಬ್ಬಂದಿಗಳು, ಸರ್ಕಾರಕ್ಕೆ ಹಣ ಪಾವತಿ ಮಾಡದೆ ಇದ್ದರೆ, ಬಂಧಿಸುವುದಾಗಿ ಬೆದರಿಕೆ ಹಾಕಿದ್ದರು. ನಂತರ ಅಮೆರಿಕದ ಕಾಲ್ ಸೆಂಟರ್ ಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಡೆಬಿಟ್ ಕಾರ್ಡ್ ಹಾಗೂ ವೈರ್ ಟ್ರಾನ್ಸ್ಫರ್ ಮೂಲಕ ಹಣ ಪಾವತಿ ಮಾಡುವಂತೆ ಸೂಚಿಸಲಾಗಿತ್ತು. ಹಣ ಪಾವತಿ ಮಾಡುತ್ತಿದ್ದಂತೆಯೇ ಅದನ್ನು ಬೇರೆ ದೇಶಕ್ಕೆ ವರ್ಗಾಯಿಸಲಾಗಿದೆ ಎಂದು ಅಮೆರಿಕ ನ್ಯಾಯಾಂಗ ಅಧಿಕಾರಿಗಳು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ 20 ಜನರನ್ನು ಬಂಧಿಸಿರುವ ಅಮೆರಿಕ, ಒಟ್ಟು 56 ಜನರ ವಿರುದ್ಧ ಆರೋಪ ಪಟ್ಟಿ ದಾಖಲಿಸಿದ್ದು. ಭಾರತದ 5 ಕಾಲ್ ಸೆಂಟರ್ ಹಾಗೂ 32 ಜನರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ತಿಳಿದುಬಂದಿದೆ. ಆರೋಪ ಪಟ್ಟಿಯಲ್ಲಿ ಹೆಸರುಳ್ಳ ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಅಮೆರಿಕ ಅಧಿಕಾರಿಗಳು ಮನವಿ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


