ರನ್ ವೇಯಲ್ಲಿ ಧಗಧಗನೇ ಹೊತ್ತಿ ಉರಿದ ವಿಮಾನ: 169 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾ ಸುಮಾರು 20 ಮಂದಿ ಗಾಯಗೊಂಡಿರುವ ಘಟನೆ ಚಿಕಾಗೋದ ಓಹಾರೆ ಏರ್‍ಪೋರ್ಟ್‍ನಲ್ಲಿ ಸಂಭವಿಸಿದೆ. 169 ...

ಚಿಕಾಗೋ: ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾ ಸುಮಾರು 20 ಮಂದಿ ಗಾಯಗೊಂಡಿರುವ ಘಟನೆ ಚಿಕಾಗೋದ ಓಹಾರೆ ಏರ್‍ಪೋರ್ಟ್‍ನಲ್ಲಿ ಸಂಭವಿಸಿದೆ. 169 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರನ್ ವೇಯಲ್ಲಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಆತಂಕ ಮತ್ತು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಮಿಯಾಮಿಗೆ ತೆರಳಬೇಕಿದ್ದ ಅಮೆರಿಕನ್ ಏರ್‍ಲೈನ್ಸ್‍ನ ಬೋಯಿಂಗ್ 767 ವಿಮಾನವು ಚಿಕಾಗೋ ವಿಮಾನನಿಲ್ದಾಣದಿಂದ ಮೇಲೇರಲು ರನ್‍ವೇಯಲ್ಲಿ ಹೋಗುತ್ತಿದ್ದಾಗ ಬೆಂಕಿ ತಗುಲಿತು. ತಕ್ಷಣ ಎಚ್ಚೆತ್ತ ಸಿಬ್ಬಂದಿ ತುರ್ತು ನಿರ್ಗಮನ ದ್ವಾರಗಳ ಮೂಲಕ ಪ್ರಯಾಣಿಕರ ಪಾರಾಗಲು ಸೂಚಿಸಿದರು. ಎಮರ್ಜೆನಿ ಸ್ಲೈಡ್ ಮೂಲ ಪ್ರಯಾಣಿಕರು ನಿರ್ಗಮಿಸುವ ಸಂದರ್ಭದಲ್ಲಿ ಕನಿಷ್ಠ 20 ಮಂದಿ ಪ್ರಯಾಣಿಕರಿಗೆ ತರಚು ಗಾಯಗಳು ಮತ್ತು ಮೂಳೆಗೆ ಪೆಟ್ಟಾಗಿವೆ. ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ವಿಮಾನದಲ್ಲಿ 161 ಪ್ರಯಾಣಿಕರು ಮತ್ತು ಒಂಭತ್ತು ಮಂದಿ ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


