ಮೋದಿ- ಕ್ಸಿ ಜಿಂಗ್ ಪಿಂಗ್ ಭೇಟಿ ವೇಳೆ ಎನ್ಎಸ್ ಜಿ, ಸಿಪಿಇಸಿ ಚರ್ಚೆ ಸಾಧ್ಯತೆ
ಚೀನಾ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತದ ಮಹತ್ವಾಕಾಂಕ್ಷಿ ಎನ್ಎಸ್ ಜಿ ಹಾಗೂ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆ ಚರ್ಚೆ ಬರಲಿರುವ ಮುಖ್ಯ ವಿಷಯವಾಗಿರಲಿವೆ.

ಬೀಜಿಂಗ್: ವಿಯೆಟ್ನಾಂ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ತೆರಳಲಿದ್ದು, ಚೀನಾ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತದ ಮಹತ್ವಾಕಾಂಕ್ಷಿ ಎನ್ಎಸ್ ಜಿ ಹಾಗೂ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆ ಚರ್ಚೆ ಬರಲಿರುವ ಮುಖ್ಯ ವಿಷಯವಾಗಿರಲಿವೆ.
ಚೀನಾ ಈಗಾಗಲೇ ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಅಡ್ಡಗಾಲು ಹಾಕಿದ್ದರೂ, ಈಗ ಮತ್ತೊಮ್ಮೆ ಭಾರತದ ಸದಸ್ಯತ್ವಕ್ಕೆ ಬೆಂಬಲ ನೀಡುವಂತೆ ಚೀನಾಗೆ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಜೂನ್ ನಲ್ಲಿ ತಾಷ್ಕೆಂಟ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷರನ್ನು ಭೇಟಿ ಮಾಡಿದ್ದ ಪ್ರಧಾನಿ ಮೋದಿ ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೀನಾದ ತಜ್ಞರು ಉಭಯ ನಾಯಕರ ದ್ವಿಪಕ್ಷೀಯ ಮಾತುಕತೆ ಫಲಪ್ರದವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


