ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುವುದನ್ನು ಎದುರುನೋಡುತ್ತಿದ್ದಾರೆ: ಭಾರತೀಯ ರಾಯಭಾರಿ
ನವೆಂಬರ್ ನಲ್ಲಿ ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದಾರೆ ಎಂದು ಭಾರತೀಯ ಹೈಕಮಿಷನರ್ ಹೇಳಿದ್ದಾರೆ.

ಕರಾಚಿ: ನವೆಂಬರ್ ನಲ್ಲಿ ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದಾರೆ ಎಂದು ಭಾರತೀಯ ಹೈಕಮಿಷನರ್ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿರುವ ಪಾಕಿಸ್ತಾನದಲ್ಲಿನ ಭಾರತೀಯ ರಾಯಭಾರಿ ಗೌತಮ್ ಬಾಂಬಾವಲೆ ಬಾಂಬವಾಲೆ, ನಿರ್ದಿಷ್ಟ ವ್ಯಾಪ್ತಿಯ ವಿಷಯಗಳನ್ನು ಭಾರತ- ಪಾಕಿಸ್ತಾನ ಚರ್ಚಿಸಬೇಕು ಎಂದು ಗೌತಮ್ ಬಾಂಬಾವಲೆ ಎಂದು ಹೇಳಿದ್ದಾರೆ.
ಭವಿಷ್ಯದ ಬಗ್ಗೆ ಏನನ್ನೂ ಹೇಳಲಾರೆ, ಆದರೆ ಇವತ್ತಿನ ಮಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುವುದನ್ನು ಎದುರುನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. ಪಾಕಿಸ್ತಾನ- ಭಾರತದ ದ್ವಿಪಕ್ಷೀಯ ಸಂಬಂಧ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನಕ್ಕೆ ಗೈರು ಹಾಜರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತದ ಹೈಕಮಿಷನರ್ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಭೇಟಿ ನೀಡುವುದನ್ನು ಎದುರುನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


