ವಿದೇಶ

ಆಫ್ಘಾನಿಸ್ತಾನದಲ್ಲಿ ತ್ರಿವಳಿ ಬಾಂಬ್ ಸ್ಫೋಟ 24 ಸಾವು

ತಾಲಿಬಾಲ್ ನಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟದಲ್ಲಿ 24 ಮಂದಿ ಸಾವನ್ನಪ್ಪಿದ ನಂತರ ಆಫ್ಘಾನಿಸ್ತಾನ್ ದ ರಾಜಧಾನಿ ಕಾಬೂಲ್ ನಲ್ಲಿ ಕಳೆದ ರಾತ್ರಿ ಭಾರೀ...

ಆಫ್ಘಾನಿಸ್ತಾನದಲ್ಲಿ ತ್ರಿವಳಿ ಬಾಂಬ್ ಸ್ಫೋಟ 24 ಸಾವು
ಕಾಬೂಲ್ ಬಾಂಬ್ ಸ್ಪೋಟ
Published On :

ಕಾಬೂಲ್: ತಾಲಿಬಾಲ್ ನಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟದಲ್ಲಿ 24 ಮಂದಿ ಸಾವನ್ನಪ್ಪಿದ ನಂತರ ಆಫ್ಘಾನಿಸ್ತಾನ್ ದ ರಾಜಧಾನಿ ಕಾಬೂಲ್ ನಲ್ಲಿ ಕಳೆದ ರಾತ್ರಿ ಭಾರೀ ಬಾಂಬ್ ಸ್ಪೋಟ ಸಂಭವಿಸಿದೆ.

ಆಫ್ಘಾನಿಸ್ತಾನದಲ್ಲಿ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು ಹತ್ಯಕಾಂಡ ನಡೆಸುತ್ತಿದ್ದಾರೆ. ತಾಲಿಬಾನ್ ನಲ್ಲಿ ನಡೆದ ಅವಳಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 24 ಮಂದಿ ಮೃತಪಟ್ಟಿದ್ದು 91 ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂರನೇ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಪ್ರಕಿಕ್ರಿಯಿಸಿರುವ ಅಧಿಕಾರಿಗಳು ಕಾಬೂಲ್ ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಇನ್ನು ಬಾಂಬ್ ಸ್ಫೋಟದ ಹೊಣೆಗಾರಿಕೆಯನ್ನು ಯಾವುದೇ ಉಗ್ರ ಸಂಘಟನೆ ಹೊತ್ತುಗೊಂಡಿಲ್ಲ ಎಂದು ಹೇಳಿದ್ದಾರೆ.

ತಾಲಿಬಾಲ್ ನ ರಕ್ಷಣಾ ಸಚಿವಾಲಯದ ಬಳಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಉನ್ನತ ಪದಾಧಿಕಾರಿಗಳು ಹಾಗೂ ಸೇನಾ ಮುಖ್ಯಸ್ಥರೊಬ್ಬರು ಸೇರಿದಂತೆ 24 ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.