ವಿದೇಶ

ಬಾಂಗ್ಲಾದಲ್ಲಿ ಭೀಕರ ಅಗ್ನಿ ದುರಂತ; 25 ಸಾವು, 70 ಮಂದಿಗೆ ಗಾಯ

ಬಾಂಗ್ಲಾದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಗೊಂಡ ಪರಿಣಾಮ ಸಂಭವಿಸಿದ ಅಗ್ನಿ ದುರಂತದಲ್ಲಿ 25 ಮಂದಿ ಸಾವಿಗೀಡಾಗಿದ್ದಾರೆ.

ಬಾಂಗ್ಲಾದಲ್ಲಿ ಭೀಕರ ಅಗ್ನಿ ದುರಂತ; 25 ಸಾವು, 70 ಮಂದಿಗೆ ಗಾಯ
ಢಾಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ (ಎಎಫ್ ಪಿ ಚಿತ್ರ)
Published On :

ಢಾಕಾ: ಬಾಂಗ್ಲಾದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಗೊಂಡ ಪರಿಣಾಮ ಸಂಭವಿಸಿದ ಅಗ್ನಿ ದುರಂತದಲ್ಲಿ 25 ಮಂದಿ ಸಾವಿಗೀಡಾಗಿದ್ದಾರೆ.

ರಾಜಧಾನಿ ಢಾಕಾದ ಉತ್ತರ ಭಾಗದಲ್ಲಿರುವ ಟೊಂಗಿ ವಾಣಿಜ್ಯ ಪ್ರದೇಶದಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ನಿನ್ನೆ ತಡರಾತ್ರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ಸುಮಾರು  100ಕ್ಕೂ ಅಧಿಕ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಅತಿಯಾದ ಒತ್ತಡದಿಂದಾಗಿ ಬಾಯ್ಲರ್ ಸ್ಫೋಟಗೊಂಡಿದ್ದು, ಈ ವೇಳೆ  ಹೊತ್ತಿಕೊಂಡ ಬೆಂಕಿಯಲ್ಲಿ ಸುಮಾರು 25ಕ್ಕೂ ಅಧಿಕ ಮಂದಿ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ.

ಮೂಲಗಳ ಪ್ರಕಾರ ಪ್ರಸ್ತುತ ಅಗ್ನಿ ಅವಘಡ ಸಂಭವಿಸಿರುವ ಕಾರ್ಖಾನೆಯಲ್ಲಿ ಹಲವು ಬಗೆಯ ರಾಸಾಯನಿಕಗಳನ್ನು ಶೇಖರಿಸಿಡಲಾಗಿತ್ತು. ಈ ವೇಳೆ ಶಂಕಿತ ಶಾರ್ಟ್ ಸರ್ಕ್ಯೂಟ್ ನಿಂದಾಗಿ  ಬೆಂಕಿ ತಗುಲಿದ್ದು, ಆರಂಭದಲ್ಲಿ ಬಾಯ್ಲರ್ ಕೊಠಡಿಗೆ ವ್ಯಾಪಿಸಿದ್ದ ಬೆಂಕಿಯ ಕೆನ್ನಾಲಿಗೆ ನೋಡ ನೋಡುತ್ತಿದ್ದಂತೆಯೇ ಇಡೀ ಕಾರ್ಖಾನೆಯನ್ನು ಆವರಿಸಿತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.  ಪ್ರಕರಣ ದಾಖಲಿಸಿಕೊಂಡಿರುವ ಟೊಂಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.