ವಿದೇಶ

ಭಯೋತ್ಪಾದನೆ ವಿಚಾರವಾಗಿ ವಿಶ್ವಸಂಸ್ಥೆಗೇ ಬಿಸಿ ಮುಟ್ಟಿಸಿದ ಭಾರತ!

ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ದಾಳಿಯಿಂದ ಶಾಂತಿಯುತ ಸ್ಥಿತಿ ಹದಗೆಡುತ್ತಿದ್ದು, ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ವಿಶ್ವಸಂಸ್ಥೆ ಕಾರ್ಯವೈಖರಿ ಬಗ್ಗೆ ಭಾರತ ಅಸಮಾಧಾನ ವ್ಯಕ್ತಪಡಿಸಿದೆ.

ಭಯೋತ್ಪಾದನೆ ವಿಚಾರವಾಗಿ ವಿಶ್ವಸಂಸ್ಥೆಗೇ ಬಿಸಿ ಮುಟ್ಟಿಸಿದ ಭಾರತ!
ಭಯೋತ್ಪಾದನೆ ವಿಚಾರವಾಗಿ ವಿಶ್ವಸಂಸ್ಥೆಗೇ ಬಿಸಿ ಮುಟ್ಟಿಸಿದ ಭಾರತ!
Published On :

ವಿಶ್ವಸಂಸ್ಥೆ: ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ದಾಳಿಯಿಂದ ಶಾಂತಿಯುತ ಸ್ಥಿತಿ ಹದಗೆಡುತ್ತಿದ್ದು, ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ವಿಶ್ವಸಂಸ್ಥೆ ಕಾರ್ಯವೈಖರಿ ಬಗ್ಗೆ ಭಾರತ ಅಸಮಾಧಾನ ವ್ಯಕ್ತಪಡಿಸಿದೆ.

ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸುತ್ತಿರುವ ತಾಲಿಬಾನ್ ಉಗ್ರ ಸಂಘಟನೆಯ ನೂತನ ಮುಖಂಡ ಹೈಬತ್-ಉಲ್ಲಾಹ್ ನಿಗೆ ತಪ್ಪಿಸಿಕೊಳ್ಳಲು ವಿಶ್ವಸಂಸ್ಥೆ ಅವಕಾಶ ನೀಡಿದೆ ಎಂದು ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ತಾಲಿಬಾನ್ ಉಗ್ರ ಸಂಘಟನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದ್ದ ವಿಶ್ವಸಂಸ್ಥೆಯ ಕಾರ್ಯವೈಖರಿ ಬಗ್ಗೆಯೂ ಭಾರತದ ಖಾಯಂ ಪ್ರತಿನಿಧಿ ತನ್ಮಯ ಲಾಲ್ ಬುಧವಾರ ಅಫ್ಘಾನಿಸ್ತಾನದ ಬಗ್ಗೆ ವಿಶ್ವಸಂಸ್ಥೆ ಮಂಡಳಿಯಲ್ಲಿ ನಡೆದ ಸಭೆಯ ವೇಳೆ ಆಕ್ಷೇಪ ವ್ಯಕ್ತಪಡಿಸಿದ್ದು, ತಾಲಿಬಾನ್ ಉಗ್ರ ಸಂಘಟನೆಯ ಮುಖಂಡನನ್ನು ಈ ವರೆಗೂ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಸದೆ ಇರುವುದು ನಮಗೆ ಅಚ್ಚರಿ ಮೂಡಿಸಿದೆ ಎಂದು ಹೇಳಿದ್ದಾರೆ.

ವಿಶ್ವಸಂಸ್ಥೆಯ ಕಾರ್ಯವೈಖರಿ ಉಗ್ರ ಸಂಘಟನೆಗಳು ಮಾಡುವ ಕೃತ್ಯಗಳಿಗೆ ಆ ಸಂಘಟನೆಗಳ ನಾಯಕರು ಹೊಣೆಗಾರರನ್ನಾಗಿ ಮಾಡದೆ ಇರಲು ಯೋಚಿಸುತ್ತಿರುವಂತಿದೆ ಎಂದಿರುವ  ತನ್ಮಯ ಲಾಲ್, ಅಂತಾರಾಷ್ಟ್ರೀಯ ಶಾಂತಿ ಹಾಗು ಭದ್ರತೆ ವಿಚಾರವಾಗಿ ನಾವು ನಡೆದುಕೊಳ್ಳುತ್ತಿರುವ ರೀತಿ ಇದೇನಾ ಎಂದು ವಿಶ್ವಸಂಸ್ಥೆಯನ್ನು ಪ್ರಶ್ನಿಸಿದ್ದಾರೆ.

ಭಯೋತ್ಪಾದಕ ಸಂಘಟನೆಗಳ ವಿರುದ್ಧದ ನಿಷೇಧವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕಿದೆ ಎಂದಿರುವ ಭಾರತದ ಪ್ರತಿನಿಧಿ,  ಅಫ್ಘಾನಿಸ್ತಾನದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿರುವುದಕ್ಕೆ ಪಾಕಿಸ್ತಾನವನ್ನು ಟೀಕಿಸಿದ್ದಾರೆ. ಅಫ್ಘಾನಿಸ್ತಾನದ ನೆರೆಯ ರಾಷ್ಟ್ರಗಳು ಭಯೋತ್ಪಾದನೆಗೆ ಸುರಕ್ಷಿತ ವಾತಾವರಣ ಕಲ್ಪಿಸುವುದನ್ನು ಮೊದಲು ನಿಲ್ಲಿಸಬೇಕು ಎಂದು ಪಾಕಿಸ್ತಾನದ ಹೆಸರು ಹೇಳದೇ  ತನ್ಮಯ ಲಾಲ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.