ಮತ್ತೆ ಪಾಕ್ ಭಂಡತನ: ಯುಎನ್ ಜಿ ಎ ಸಭೆಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಲಿರುವ ನವಾಜ್ ಷರೀಫ್
ವಿಶ್ವಸಂಸ್ಥೆಯ 71 ನೇ ಮಹಾಸಭೆಗೆ ಪಾಕಿಸ್ತಾನ ನಿಯೋಗದೊಂದಿಗೆ ತೆರಳಿರುವ ಅಲ್ಲಿನ ಪ್ರಧಾನಿ ನವಾಜ್ ಷರೀಫ್, ಕಾಶ್ಮೀರ ವಿಷಯವನ್ನು ಕಾರ್ಯಸೂಚಿಯಾಗಿಟ್ಟುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನ್ಯೂಯಾರ್ಕ್:ವಿಶ್ವಸಂಸ್ಥೆಯ 71 ನೇ ಮಹಾಸಭೆಗೆ ಪಾಕಿಸ್ತಾನ ನಿಯೋಗದೊಂದಿಗೆ ತೆರಳಿರುವ ಅಲ್ಲಿನ ಪ್ರಧಾನಿ ನವಾಜ್ ಷರೀಫ್, ಕಾಶ್ಮೀರ ವಿಷಯವನ್ನು ಕಾರ್ಯಸೂಚಿಯಾಗಿಟ್ಟುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಾಶ್ಮೀರ ವಿಷಯ ಹಾಗೂ ಗಡಿ ಪ್ರದೇಶದಲ್ಲಿನ ಭಯೋತ್ಪಾದನೆ ವಿಷಯಗಳು ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಹದಗೆಡುತ್ತಿದ್ದರೂ, ಸಹ ಪಾಕ್ ಪ್ರಧಾನಿ ನವಾಜ್ ಷರೀಫ್ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವ ಸಿದ್ಧತೆ ನಡೆಸಿದ್ದಾರೆ. ಈ ಮೂಲಕ ಪಾಕಿಸ್ತಾನ ಮತ್ತೊಮ್ಮೆ ತನ್ನ ಭಂಡತನ ಪ್ರದರ್ಶಿಸಲು ಸಜ್ಜಾಗಿದೆ. ಭಾರತದ ಗಡಿ ಪ್ರದೇಶದಲ್ಲಿ ಶನಿವಾರ ನಡೆದಿರುವ ಉಗ್ರ ದಾಳಿಯ ಹಿಂದೆಯೂ ಪಾಕಿಸ್ತಾನದ ಕೈವಾಡವಿದೆ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.
ಪಾಕ್ ಪ್ರಧಾನಿಯ ವಿಶ್ವಸಂಸ್ಥೆ ಕಾರ್ಯಸೂಚಿಗಳ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಅಹ್ಮದ್ ಚೌಧರಿ, ಸೆ.21 ರಿಂದ ನಡೆಯಲಿರುವ ವಿಶ್ವಸಂಸ್ಥೆಯ 71 ನೇ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನವಾಜ್ ಷರೀಫ್, ವಿಶೇಷವಾಗಿ ಜಮ್ಮು-ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಕಾಶ್ಮೀರ ಜನತೆಯ ಅಭಿಪ್ರಾಯ ಸಂಗ್ರಹಣೆ ಮಾಡುವಂತೆ ನವಾಜ್ ಷರೀಫ್ ಅಂತಾರಾಷ್ಟ್ರೀಯ ಸಮುದಾಯ ಹಾಗೂ ವಿಶ್ವಸಂಸ್ಥೆಗೆ ಮನವಿ ಮಾಡಲಿದ್ದಾರೆ ಎಂದು ಅಜೀಜ್ ಅಹ್ಮದ್ ಚೌಧರಿ ತಿಳಿಸಿದ್ದಾರೆ. ಇದೆ ವೇಳೆ ನವಾಜ್ ಷರೀಫ್ ಅಮೆರಿಕದ ವಿದೇಶಾಂಗ ಸಚಿವ ಜಾನ್ ಕೆರ್ರಿ ಅವರನ್ನೂ ಭೇಟಿ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


