ವಿದೇಶ

ಉರಿ ಉಗ್ರ ದಾಳಿ: ಪಾಕಿಸ್ತಾನಕ್ಕೆ ಮರ್ಮಾಘಾತ, ಜಂಟಿ ಸೇನಾ ತಾಲೀಮು ರದ್ದುಗೊಳಿಸಿದ ರಷ್ಯಾ!

ಸೇನಾ ಕಚೇರಿ ಮೇಲೆ ಪಾಕಿಸ್ತಾನ ಭಯೋತ್ಪಾದಕರು ದಾಳಿ ನಡೆಸಿದ ಬೆನ್ನಲ್ಲೇ ರಷ್ಯಾ ಪಾಕಿಸ್ತಾನದೊಂದಿಗೆ ಈ ಹಿಂದೆಯೇ ನಿಗದಿಯಾಗಿದ್ದ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸಿದೆ.

ಉರಿ ಉಗ್ರ ದಾಳಿ: ಪಾಕಿಸ್ತಾನಕ್ಕೆ ಮರ್ಮಾಘಾತ, ಜಂಟಿ ಸೇನಾ ತಾಲೀಮು ರದ್ದುಗೊಳಿಸಿದ ರಷ್ಯಾ!
ಕಾಶ್ಮೀರವನ್ನು 'ಉರಿ'ಸಿದ್ದ ಪಾಕಿಸ್ತಾನಕ್ಕೆ ಮರ್ಮಾಘಾತ: ಜಂಟಿ ಸೇನಾ ತಾಲೀಮು ರದ್ದುಗೊಳಿಸಿದ ರಷ್ಯಾ!
Published On :

ಮಾಸ್ಕೊ: ಕಾಶ್ಮೀರದ ಉರಿ ಸೆಕ್ಟರ್ ನಲ್ಲಿರುವ ಸೇನಾ ಕಚೇರಿ ಮೇಲೆ ಪಾಕಿಸ್ತಾನ ಭಯೋತ್ಪಾದಕರು ದಾಳಿ ನಡೆಸಿದ ಬೆನ್ನಲ್ಲೇ ರಷ್ಯಾ ಪಾಕಿಸ್ತಾನದೊಂದಿಗೆ ಈ ಹಿಂದೆಯೇ ನಿಗದಿಯಾಗಿದ್ದ ಜಂಟಿ ಸೇನಾ ತಾಲೀಮನ್ನು ಏಕಾಏಕಿ ರದ್ದುಗೊಳಿಸಿದೆ.

ಪಾಕಿಸ್ತಾನದೊಂದಿಗಿನ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸುವ ಮೂಲಕ ರಷ್ಯಾ ಭಾರತಕ್ಕೆ ರಾಜತಾಂತ್ರಿಕ ಬೆಂಬಲ ನೀಡಿರುವುದು ಸ್ಪಷ್ಟವಾಗಿದ್ದು, ಭಾರತದ ಗಡಿ ಪ್ರದೇಶದಲ್ಲಿ ಭಯೋತ್ಪಾದಕರ ಮೂಲಕ ಪರೋಕ್ಷ ಯುದ್ಧ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರಿ ಹಿನ್ನಡೆ ಉಂಟಾಗಿದೆ.

ರಷ್ಯಾದ ನಡೆ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಭದಾಯಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸೆ.24 ರಿಂದ ಅಕ್ಟೊಬರ್ 7 ವರೆಗೆ ರಷ್ಯಾ- ಪಾಕಿಸ್ತಾನ ಪಾಕಿಸ್ತಾನದ ಉತ್ತರ ಭಾಗದಲ್ಲಿರುವ ಪ್ರದೇಶವೊಂದರಲ್ಲಿ ಜಂಟಿ ಸೇನಾ ತಾಲೀಮು ನಡೆಸುವುದು ನಿಗದಿಯಾಗಿತ್ತು. ಕೆಲವೇ ದಿನಗಳ ಹಿಂದೆ ಪಾಕಿಸ್ತಾನದೊಂದಿಗಿನ ಜಂಟಿ ತಾಲೀಮಿನ ಬಗ್ಗೆ ಸ್ಪಷ್ಟನೆ ನೀಡಿದ್ದ ರಷ್ಯಾ, ಭಾರತ ಇದರಿಂದ ಆತಂಕ ಪಡಬೇಕಿಲ್ಲ ಎಂದು ಹೇಳಿತ್ತು. ಆದರೆ ರಷ್ಯಾ ಸ್ಪಷ್ಟನೆ ನೀಡಿದ ಒಂದೆರಡು ದಿನಗಳಲ್ಲಿ ಪಾಕಿಸ್ತಾನ ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಾರತೀಯ ಸೇನೆಯ ಪ್ರಧಾನ ಕಚೇರಿ ಮೇಲೆ ಭಯೋತ್ಪಾದಕರ ಮೂಲಕ ದಾಳಿ ನಡೆಸಿ 18 ಯೋಧರ ಸಾವಿಗೆ ಕಾರಣವಾಗಿತ್ತು. ದಾಳಿ ನಡೆದ ಎರಡು ದಿನಗಳಲ್ಲಿ ರಷ್ಯಾ ಪಾಕ್ ನೊಂದಿಗೆ ನಡೆಯಬೇಕಿದ್ದ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.