ಪಾಕಿಸ್ತಾನಕ್ಕೆ ಬೆಂಬಲ: ಪ್ರೀಮಿಯರ್ ಲಿ ಕಿಕ್ವ್ಯಾಂಗ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಚೀನಾ
ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿದ್ದ ಚೀನಾ ಪ್ರೀಮಿಯರ್ ಲಿ ಕಿಕ್ವ್ಯಾಂಗ್ ಹೇಳಿಕೆಯಿಂದ ಚೀನಾ ಅಂತರ ಕಾಯ್ದುಕೊಂಡಿದೆ.

ಬೀಜಿಂಗ್: ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿದ್ದ ಚೀನಾ ಪ್ರೀಮಿಯರ್ ಲಿ ಕಿಕ್ವ್ಯಾಂಗ್ ಹೇಳಿಕೆಯಿಂದ ಚೀನಾ ಅಂತರ ಕಾಯ್ದುಕೊಂಡಿದೆ.
ಯುಎನ್ ಜಿ ಎ ಸಭೆಯಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಚೀನಾ ಪ್ರೀಮಿಯರ್ ಲಿ ಕಿಕ್ವ್ಯಾಂಗ್ ಕಾಶ್ಮೀರ ವಿಷಯದಲ್ಲಿ ಪಾಕಿಸ್ತಾನಕ್ಕೆ ಚೀನಾ ಬೆಂಬಲ ನೀಡುವುದಾಗಿ ಘೋಷಿಸಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೀನಾ ವಿದೇಶಾಂಗ ಇಲಾಖೆ ವಕ್ತಾರ ಲು ಕಾಂಗ್, ಕಾಶ್ಮೀರದ ವಿಚಾರವಾಗಿ ಸಂಬಂಧಪಟ್ಟ ರಾಷ್ಟ್ರಗಳು ಶಾಂತಿಯುತವಾಗಿ ಇತ್ಯರ್ಥಗೊಳಿಸಲಿ ಎಂಬುದು ಚೀನಾದ ನಿಲುವಾಗಿದೆ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದ ಬಗ್ಗೆ ಚೀನಾಗೆ ಆತಂಕವಿದೆ ಎಂದಷ್ಟೇ ಹೇಳಿರುವ ವಿದೇಶಾಂಗ ಇಲಾಖೆ ವಕ್ತಾರ, ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದ ರಾಷ್ಟ್ರಗಳು ಪ್ರಾದೇಶಿಕವಾಗಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ವಿವಾದವನ್ನು ಇತ್ಯರ್ಥಗೊಳಿಸುತ್ತವೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಆದರೆ ಚೀನಾ ಪ್ರೀಮಿಯರ್ ಲಿ ಕಿಕ್ವ್ಯಾಂಗ್ ಅವರ ಹೇಳಿಕೆಯನ್ನು ಬೆಂಬಲಿಸದೆ ಇರುವುದು ಗಮನಾರ್ಹ ವಿಷಯವಾಗಿದೆ.
ಪಾಕ್ ಪ್ರಧಾನಿ ನವಾಜ್ ಷರೀಫ್- ಚೀನಾ ಪ್ರೀಮಿಯರ್ ಲಿ ಕಿಕ್ವ್ಯಾಂಗ್ ಭೇಟಿ ಬಳಿಕ ವರದಿ ಪ್ರಕಟಿಸಿದ್ದ ಕೆಲವು ಪಾಕಿಸ್ತಾನ ಮಾಧ್ಯಮಗಳು, ಚೀನಾ ಪ್ರೀಮಿಯರ್ ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿದ್ದಾರೆ ಎಂದು ವರದಿ ಮಾಡಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


