ಜಪಾನ್ ನಲ್ಲಿ ಪ್ರಬಲ ಭೂಕಂಪನ; ಸುನಾಮಿ ಭೀತಿ ಇಲ್ಲ ಎಂದ ಹವಾಮಾನ ಇಲಾಖೆ!
ಜಪಾನ್ ನ ಪೂರ್ವ ಕರಾವಳಿ ಭಾಗದಲ್ಲಿ ಶುಕ್ರವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ದಾಖಲಾಗಿದೆ.

ಟೋಕಿಯೋ: ಜಪಾನ್ ನ ಪೂರ್ವ ಕರಾವಳಿ ಭಾಗದಲ್ಲಿ ಶುಕ್ರವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ದಾಖಲಾಗಿದೆ.
ಪೂರ್ವ ಜಪಾನ್ ನ ಕಟ್ಸೂರಾ ನಗರದಲ್ಲಿ ಬೆಳಗ್ಗೆ ಸುಮಾರು 9.14ರ ವೇಳೆಯಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ. ಭೂಕಂಪನ ಬಳಿಕ ಸಂಭವಿಸಿದ ಉಪಕಂಪನ ಕೂಡ ಪ್ರಬಲವಾಗಿದ್ದು, 6.5ರಷ್ಟು ತೀವ್ರತೆ ದಾಖಲಾಗಿದೆ ಎಂದು ಜಪಾನ್ ಹವಮಾನ ಇಲಾಖೆ ಹೇಳಿದೆ. ಆದರೆ ಈ ಪ್ರಬಲ ಕಂಪನದಿಂದ ಸುನಾಮಿ ಭೀತಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಇಲಾಖೆ, ಉಪಕಂಪನಗಳಿಂದ ಭೀತಿಗೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದೆ.
ಇನ್ನು ಭೂಕಂಪನದಿಂದಾಗಿ ಕಟ್ಸೂರಾ ನಗರದ ಕೆಲ ಬಹುಮಹಡಿ ಕಟ್ಟಡಗಳಿಗೆ ಹಾನಿಯಾದ ಕುರಿತು ಮಾಹಿತಿ ಕೇಳಿಬಂದಿದೆಯಾದರೂ, ಸಾವು-ನೋವಿನ ಕುರಿತು ಯಾವುದೇ ರೀತಿಯ ವರದಿಗಳು ಬಂದಿಲ್ಲ.
ಇದೇ ಜಪಾನ್ ಈಶಾನ್ಯ ಕರಾವಳಿಯಲ್ಲಿ 2011ರ ಮಾರ್ಚ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಸಂಭವಿಸಿದ ಸುನಾಮಿಯಿಂದಾಗಿ ಸುಮಾರು 18 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


