ಉರಿ ದಾಳಿ ಪ್ರಕರಣದಲ್ಲಿ ಪಾಕಿಸ್ತಾನ ಸಹಕಾರ ನೀಡುವ ಸಾಧ್ಯತೆ ಇಲ್ಲ: ಪಾಕ್ ಪತ್ರಿಕೆ
ಜಮ್ಮು-ಕಾಶ್ಮೀರದ ಉರಿಯಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಪಾಕಿಸ್ತಾನ ಭಾರತದೊಂದಿಗೆ ಸಹಕರಿಸುವ ಸಾಧ್ಯತೆಗಳಿಲ್ಲ ಎಂದು ಪಾಕಿಸ್ತಾನ ಪತ್ರಿಕೆ ವರದಿ ಮಾಡಿದೆ.

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ಉರಿಯಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಪಾಕಿಸ್ತಾನ ಭಾರತದೊಂದಿಗೆ ಸಹಕರಿಸುವ ಸಾಧ್ಯತೆಗಳಿಲ್ಲ ಎಂದು ಪಾಕಿಸ್ತಾನ ಪತ್ರಿಕೆ ವರದಿ ಮಾಡಿದೆ.
ಸೆ.18 ರ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿರುವ ಭಯೋತ್ಪಾದಕರ ಡಿಎನ್ಎ ಹಾಗೂ ಬೆರಳಚ್ಚುಗಳ ಮಾಹಿತಿಯನ್ನು ನೀಡುವುದಾಗಿ ಭಾರತದಲ್ಲಿರುವ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್ ಅವರಿಗೆ ಭಾರತ ಸರ್ಕಾರ ಹೇಳಿತ್ತು. ಆದರೆ ಪಾಕಿಸ್ತಾನ ಭಾರತ ನೀಡುವ ಮಾಹಿತಿಯನ್ನು ನಿರಾಕರಿಸುವ ಸಾಧ್ಯತೆ ಇದೆ ಎಂದು ಪಾಕ್ ಪತ್ರಿಕೆ ದಿ ಎಕ್ಸ್ ಪ್ರೆಸ್ ಟ್ರಿಬ್ಯುನ್ ವರದಿ ಮಾಡಿದೆ.
ಉರಿ ದಾಳಿಯಲ್ಲಿ ಪಾಕಿಸ್ತಾನದ ಮೇಲೆ ಏಕಾಏಕಿ ಆರೋಪ ಮಾಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನವನ್ನು ಒಬ್ಬಂಟಿಯಾಗಿಸಲು ಯತ್ನಿಸುತ್ತಿದೆ. ಒಂದೆಡೆ ಭಾರತ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಬ್ರಾಂಡ್ ಮಾಡುತ್ತಿದೆ, ಮತ್ತೊಂದೆಡೆ ಭಯೋತ್ಪಾದಕ ದಾಳಿ ಪ್ರಕರಣಗಳಿಗೆ ಪಾಕ್ ಸಹಕರಿಸಬೇಕು ಎಂದು ಬಯಸುತ್ತಿದೆ ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಭಾರತದೊಂದಿಗೆ ಸಹಕರಿಸುವ ಸಾಧ್ಯತೆ ಇದೆ ಎಂದು ಟ್ರಿಬ್ಯುನ್ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


