ಉರಿ ದಾಳಿಗೆ ಕಾಶ್ಮೀರದ ಪರಿಸ್ಥಿತಿಯೇ 'ಪ್ರಚೋದನೆ' ಆಗಿರಬಹುದು: ನವಾಜ್ ಷರೀಫ್
ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲಿನ ದಾಳಿ ಕಾಶ್ಮೀರ ಪರಿಸ್ಥಿತಿಯೇ ಪ್ರಚೋದನೆ ಆಗಿರಬಹುದು ಎಂದು ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ...

Published On :
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲಿನ ದಾಳಿ ಕಾಶ್ಮೀರ ಪರಿಸ್ಥಿತಿಯೇ ಪ್ರಚೋದನೆ ಆಗಿರಬಹುದು ಎಂದು ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.
ಕಳೆದೆರಡು ತಿಂಗಳಿನಿಂದ ಕಾಶ್ಮೀರದಲ್ಲಿ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ್ದು ಇದರಲ್ಲಿ ತಮ್ಮ ಹತ್ತಿರ ಸಂಬಂಧಿಗಳನ್ನು ಕಳೆದುಕೊಂಡವರಿಂದ ಉರಿ ಸೇನಾ ಶಿಬಿರದ ಮೇಲಿನ ದಾಳಿ ನಡೆದಿರಬಹುದು. ಆದರೆ ಭಾರತ ಮಾತ್ರ ಯಾವುದೇ ಸಾಕ್ಷ್ಯಾಧಾರವಿಲ್ಲದೆ ಪಾಕಿಸ್ತಾನವನ್ನು ನಿಂದಿಸುತ್ತಿದೆ ಎಂದು ನವಾಜ್ ಷರೀಫ್ ಆರೋಪಿಸಿದ್ದಾರೆ.
ಅಮೆರಿಕದಲ್ಲಿ ನಡೆದ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ನವಾಜ್ ಷರೀಫ್ ಅವರು ಲಂಡನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಪತ್ರಕರ್ತರು ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ. ಉರಿ ದಾಳಿ ಬಳಿಕ ಭಾರತ ಯಾವುದೇ ತನಿಖೆ ನಡೆಸದೆ. ಯಾವುದೇ ಸಾಕ್ಷ್ಯಾಧಾರವಿಲ್ಲದೆ ತರಾತುರಿಯಲ್ಲಿ ಪಾಕಿಸ್ತಾನವನ್ನು ಬೇಜವಾಬ್ದಾರಿಯಿಂದ ನಿಂದಿಸುತ್ತಿದೆ ಎಂದು ಹೇಳಿದ್ದಾರೆ.
ಉರಿ ಸೇನಾ ಶಿಬಿರದ ಮೇಲಿನ ಉಗ್ರ ದಾಳಿ ನಡೆದ ಕೆಲ ಗಂಟೆಗಳಲ್ಲೆ ಭಾರತ ಪಾಕಿಸ್ತಾನವನ್ನು ನಿಂದಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು ಭಾರತದ ದೌರ್ಜನ್ಯದಿಂದಾಗಿ ಕಾಶ್ಮೀರದಲ್ಲಿ ಇಲ್ಲಿಯವರೆಗೂ 108 ಜನರು ಮೃತಪಟ್ಟಿದ್ದು, 150 ಜನರು ಅಂಧರಾಗಿದ್ದು ಸಾವಿರಾರು ಜನರು ಗಾಯಗೊಂಡಿರುವ ವಿಚಾರ ಜಗತ್ತಿಗೆ ಗೊತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


