ಚೀನಾದಲ್ಲಿ ಭೂ ಕುಸಿತ; 6ಕ್ಕೇರಿದ ಸಾವಿನ ಸಂಖ್ಯೆ, 23 ಮಂದಿ ನಾಪತ್ತೆ
ಚೀನಾದಲ್ಲಿ ಭೂಕುಸಿತ ಉಂಟಾದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 8ಕ್ಕೇರಿದೆ. ಅಂತೆಯೇ 23 ಮಂದಿ ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಬೀಜಿಂಗ್: ಮೆಗಿ ಸೈಕ್ಲೋನ್ ಪರಿಣಾಮ ಕಳೆದೊಂದು ವಾರದಿಂದ ಚೀನಾದಲ್ಲಿ ಭಾರಿ ಮಳೆಯಾಗುತ್ತಿದ್ದು, ಆಗ್ನೇಯ ಚೀನಾದಲ್ಲಿ ಭೂಕುಸಿತ ಉಂಟಾದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದೆ. ಅಂತೆಯೇ 23 ಮಂದಿ ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಚೀನಾದ ಜೆಜಿಯಾಂಗ್, ದಕ್ಷಿಣ ಶಾಂಘೈನಗರಗಳಲ್ಲಿ ಭೂ ಕುಸಿತ ಉಂಟಾದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಕಾರ್ಯಾಚರಣೆಯಲ್ಲಿ ಚೀನಾ ಸೇನೆಯ ಶ್ವಾನದಳವನ್ನು (ಸ್ನಿಫರ್ ಡಾಗ್) ಬಳಸಿಕೊಳ್ಳಲಾಗುತ್ತಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವ ಮೃತದೇಹಗಳ ಹಾಗೂ ಸಾವು-ನೋವಿನ ನಡುವೆ ಸಿಲುಕಿರುವವರ ರಕ್ಷಣೆಯಲ್ಲಿ ನಾಯಿಗಳು ಮಹತ್ತರ ಪಾತ್ರವಹಿಸುತ್ತಿವೆ ಎಂದು ಹೇಳಲಾಗುತ್ತಿದೆ.
ಇನ್ನು ಸುಕುನ್ ಪ್ರಾಂತ್ಯದಲ್ಲಿ 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಆಗ್ನೇಯ ಚೀನಾದಲ್ಲಿ ಉಂಟಾಗಿರುವ ಪ್ರವಾಹ ಕ್ರಮೇಣ ಹೆಚ್ಚಾಗುತ್ತಿದ್ದು, ನೀರಿನ ವೇಗಕ್ಕೆ ಸಮೀಪದ ಕಟ್ಟಡಗಳೆಲ್ಲವೂ ಕೊಚ್ಚಿಕೊಂಡು ಹೋಗುತ್ತಿವೆ.
ಒಟ್ಟಾರೆ ಮೆಗಿ ಸೈಕ್ಲೋನ್ ಗೆ ಚೀನಾ ನಲುಗಿ ಹೋಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


