ರಷ್ಯಾ: ಮೆಟ್ರೋ ನಿಲ್ದಾಣದಲ್ಲಿ ಬಾಂಬ್ ಸ್ಫೋಟ; 10 ಸಾವು, 20 ಜನರಿಗೆ ಗಾಯ
ರಷ್ಯಾದಲ್ಲಿ ಉಗ್ರರು ಬಾಂಬ್ ಸ್ಫೋಟ ನಡೆಸಿದ್ದು ಕನಿಷ್ಠ 10 ಮಂದಿ ಮೃತಪಟ್ಟಿದ್ದು 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

Published On :
ಮಾಸ್ಕೋ: ರಷ್ಯಾದಲ್ಲಿ ಉಗ್ರರು ಬಾಂಬ್ ಸ್ಫೋಟ ನಡೆಸಿದ್ದು ಕನಿಷ್ಠ 10 ಮಂದಿ ಮೃತಪಟ್ಟಿದ್ದು 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಸೇಂಟ್ ಪೀಟರ್ಸ್ ಬರ್ಗ್ ನ ಸನಾಯಾ ಮೆಟ್ರೋ ನಿಲ್ದಾಣ ಸೇರಿ ಎರಡು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಐಇಡಿ ಬಳಸಿ ಸ್ಫೋಟ ನಡೆಸಲಾಗಿದೆ. ಘಟನೆಯಲ್ಲಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ 20 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಇತ್ತೀಚಿನ ವರದಿ ಮೂಲಕ ತಿಳಿದುಬಂದಿದೆ.
ಬಾಂಬ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ 8 ಮೆಟ್ರೋ ನಿಲ್ದಾಣಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಲಾಗಿದೆ. ಭದ್ರತಾ ಸಿಬ್ಬಂದಿಗಳು, ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಬಾಂಬ್ ಸ್ಫೋಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


