ವಿದೇಶ

ರಷ್ಯಾ ಮೆಟ್ರೊ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್‌ ಮೆಟ್ರೊ ಸುರಂಗ ಮಾರ್ಗದಲ್ಲಿ ಸೋಮವಾರ ಸಂಭವಿಸಿದ ಅವಳಿ ಸ್ಫೋಟ ಪ್ರಕರಣದಲ್ಲಿ....

ರಷ್ಯಾ ಮೆಟ್ರೊ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 14ಕ್ಕೆ ಏರಿಕೆ
ಟೆಕ್ನೊಲಾಜಿಚೆಸ್ಕಿ ಇನ್‌ಸ್ಟಿಟ್ಯೂಟ್ ನಿಲ್ದಾಣ
Published On :
ಸೇಂಟ್ ಪೀಟರ್ಸ್‌ಬರ್ಗ್‌: ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್‌ ಮೆಟ್ರೊ ಸುರಂಗ ಮಾರ್ಗದಲ್ಲಿ ಸೋಮವಾರ ಸಂಭವಿಸಿದ ಅವಳಿ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ರಷ್ಯಾದ ಆರೋಗ್ಯ ಸಚಿವರು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಒಟ್ಟು 14 ಮಂದಿ ಮೃತಪಟ್ಟಿದ್ದು, ಗಾಯಗೊಂಡ 49 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವ ವೆರೊನಿಕಾ ಸ್ಕೊತ್ಸೋವಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಸೆನ್ನಾಯ ಪ್ಲೊಶ್‌ಚೆಡ್‌ ಮತ್ತು ಟೆಕ್ನೊಲಾಜಿಚೆಸ್ಕಿ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವಿನ ಸುರಂಗದಲ್ಲಿ ನಿನ್ನೆ ಅವಳಿ ಬಾಂಬ್ ಸ್ಫೋಟಗೊಂಡಿತ್ತು. ಎರಡು ರೈಲುಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ಸೇಂಟ್ ಪೀಟರ್ಸ್‌ಬರ್ಗ್‌ನ ತುರ್ತುಸೇವಾ ವಿಭಾಗ ಮಾಹಿತಿ ನೀಡಿತ್ತು. ಅಲ್ಲದೆ ಸ್ಫೋಟಕ ವಸ್ತುವೊಂದನ್ನು ಮೆಟ್ರೊ ರೈಲಿನಲ್ಲಿ ಸಾಗಿಸಲಾಗಿದೆ ಎಂದು ಭಯೋತ್ಪಾದನಾ ನಿಗ್ರಹ ಸಮಿತಿ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.