ವಿದೇಶ

ಲಾಹೋರ್'ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 6 ಜನರ ಸಾವು

ಪಾಕಿಸ್ತಾನದ ಪೂರ್ವ ಪಂಜಾಬ್ ಪ್ರಾಂತ್ಯದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಿಸಲಾಗಿದ್ದು, ದಾಳಿಯಲ್ಲಿ ಜನಗಣತಿ ಮಾಡುತ್ತಿದ್ದ ಇಬ್ಬರು ಕೆಲಸಗಾರರು ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿರುವ...

ಲಾಹೋರ್'ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 6 ಜನರ ಸಾವು
ಸಂಗ್ರಹ ಚಿತ್ರ
Published On :
ಲಾಹೋರ್: ಪಾಕಿಸ್ತಾನದ ಪೂರ್ವ ಪಂಜಾಬ್ ಪ್ರಾಂತ್ಯದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಿಸಲಾಗಿದ್ದು, ದಾಳಿಯಲ್ಲಿ ಜನಗಣತಿ ಮಾಡುತ್ತಿದ್ದ ಇಬ್ಬರು ಕೆಲಸಗಾರರು ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. 
ಲಾಹೋರ್ ಹೊರವಲಯದಲ್ಲಿ ಇಂದು ಬೆಳಿಗ್ಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಆತ್ಮಾಹುತಿ ಬಾಂಬ್ ಸ್ಫೋಟಿಸಿದ್ದಾರೆ. ದಾಳಿಯಲ್ಲಿ 15 ಮಂದಿ ಗಾಯಗೊಂಡಿದ್ದಾರೆಂದು ಸ್ಥಳೀಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಫ್ಜಲ್ ಅವರು ಹೇಳಿದ್ದಾರೆ. 
ಇದೊಂದು ಆತ್ಮಾಹುತಿ ದಾಳಿಯಾಗಿದ್ದು, ಜನಗಣತಿ ನಡೆಸುತ್ತಿದ್ದ ತಂಡವನ್ನು ಗುರಿಯಿಟ್ಟುಕೊಂಡು ಈ ದಾಳಿಯನ್ನು ನಡೆಸಲಾಗಿದೆ ಎಂದು ಪಾಕಿಸ್ತಾನ ಸರ್ಕಾರದ ವಕ್ತಾರ ಮಲಿಕ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ.
ಇನ್ನು ದಾಳಿ ನಡೆಸಿದ್ದು ನಾವೇ ಎಂದು ಪಾಕಿಸ್ತಾನದ ನಿಷೇಧಿತ ಉಗ್ರ ಸಂಘಟನೆಯಾದ ಪಾಕಿಸ್ತಾನ್ ತಾಲೀಬಾನ್ ಎಂದು ಕರೆಯಲ್ಪಡುವ ತೆಹರಿಕ್ ತಾಲೀಬಾನ್ ಪಾಕಿಸ್ತಾನ್ (ಟಿಟಿಪಿ) ಹೇಳಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.