ವಿದೇಶ

ವಿಮಾನದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

42 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ಟರ್ಕಿಶ್ ಏರ್ ಲೈನ್ಸ್ ನ ವಿಮಾನದಲ್ಲಿ ಮಹಿಳೆಯೊಬ್ಬರು ಮುದ್ದಾಗ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ...

ವಿಮಾನದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
ಮಗುವಿನೊಂದಿಗೆ ಗಗನಸಖಿಯರು
Published On :
ಲಂಡನ್: 42 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ಟರ್ಕಿಶ್ ಏರ್ ಲೈನ್ಸ್ ನ ವಿಮಾನದಲ್ಲಿ ಮಹಿಳೆಯೊಬ್ಬರು ಮುದ್ದಾಗ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 
ಗಿನಿ ದೇಶದ ಕೊನಾಕ್ರೆ ನಿಲ್ದಾಣದಿಂದ ಟೇಕ್ ಆಫ್ ಆದ ವಿಮಾನದಲ್ಲಿ ನಫಿ ದಿಯಬೇ ಎಂಬ ಗರ್ಭಿಣಿ ಮಹಿಳೆ ಪ್ರಯಾಣಿಸುತ್ತಿದ್ದು ವಿಮಾನ 42 ಸಾವಿರ ಅಡಿ ಎತ್ತರದಲ್ಲಿ ಸಾಗುತ್ತಿದ್ದಾಗ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಗ ತಕ್ಷಣ ಅವರ ನೆರವಿಗೆ ಬಂದ ಗಗನ ಸಖೀಯರು ಹಾಗೂ ವಿಮಾನ ಸಿಬ್ಬಂದಿ, ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. 
ಮಗು ಜನಿಸುತ್ತಿದ್ದಂತೆ ಅದಕ್ಕೆ ಕಾಡಿಜು ಎಂದು ಹೆಸರಿಡಲಾಗಿದ್ದು ಬುರ್ಕಿನಾ ಫಾಸೋ ದೇಶದಲ್ಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ತಾಯಿ ಹಾಗೂ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ತಾಯಿ ಮಗು ಸುರಕ್ಷಿತವಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.