ವಿದೇಶ

60 ದಿನದೊಳಗೆ ಜಾಧವ್ ಗಲ್ಲು ಶಿಕ್ಷೆ ವಿರುದ್ಧ ಸೇನಾ ಮುಖ್ಯಸ್ಥರಿಗೆ ಮೇಲ್ಮನವಿ ಸಲ್ಲಿಸಬಹುದು: ಪಾಕ್

ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು ಪಾಕಿಸ್ತಾನ ಸೇನಾ ಕೋರ್ಟ್ ತಮಗೆ ವಿಧಿಸಿರುವ...

60 ದಿನದೊಳಗೆ ಜಾಧವ್ ಗಲ್ಲು ಶಿಕ್ಷೆ ವಿರುದ್ಧ ಸೇನಾ ಮುಖ್ಯಸ್ಥರಿಗೆ ಮೇಲ್ಮನವಿ ಸಲ್ಲಿಸಬಹುದು: ಪಾಕ್
ಕುಲಭೂಷಣ್ ಜಾಧವ್
Published On :
ಇಸ್ಲಾಮಾಬಾದ್: ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು ಪಾಕಿಸ್ತಾನ ಸೇನಾ ಕೋರ್ಟ್ ತಮಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ 60 ದಿನದೊಳಗೆ ಸೇನಾ ಮುಖ್ಯಸ್ಥರಿಗೆ ಮೇಲ್ಮನವಿ ಸಲ್ಲಿಸಬಹುದು ಎಂದು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಮಂಗಳವಾರ ಹೇಳಿದ್ದಾರೆ.
ಜಾಧವ್ ಗಲ್ಲು ಶಿಕ್ಷೆಯನ್ನು ಭಾರತ ತೀವ್ರವಾಗಿ ಖಂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪಾಕ್ ರಕ್ಷಣಾ ಸಚಿವರು, ತಮ್ಮ ಸೇನೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ ಗೂಢಾಚಾರ ಆರೋಪ ಎದುರಿಸುತ್ತಿದ್ದ ಕುಲಭೂಷಣ್ ಯಾದವ್ ಅವರನ್ನು ಮೂರು ತಿಂಗಳ ಕಾಲ ವಿಚಾರಣೆ ಮಾಡಲಾಗಿದೆ. ಇದರಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾವು ನಮ್ಮ ನೆಲದ ಕಾನೂನನ್ನು ಪಾಲಿಸಿದ್ದೇವೆ. ದೇಶದ ಭದ್ರತೆ ಮತ್ತು ಸ್ಥಿರತೆಗೆ ಧಕ್ಕೆ ತರುವಂತಹ ಯಾವುದೇ ಕೃತ್ಯಗಳನ್ನು ನಾವು ಸಹಿಸುವುದಿಲ್ಲ. ಅದು ದೇಶದೊಳಗೆ ಅಥವಾ ಹೊರಗೆಯಾಗರಿಲಿ ಎಂದು ಆಸಿಫ್ ಹೇಳಿದ್ದಾರೆ.
ಗೂಢಚಾರಿಕೆ ಮಾಡಿದ ಆರೋಪದ ಮೇಲೆ ಕಳೆದ ವರ್ಷ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿದ್ದ ಪಾಕಿಸ್ತಾನ, ನಿನ್ನೆ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಆದರೆ ಪಾಕಿಸ್ತಾನದ ಈ ಕ್ರಮವನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಇದೊಂದು ಪೂರ್ವ ಯೋಜಿತ ಕೊಲೆ ಎಂದಿದೆ. ಅಲ್ಲದೆ ಜಾಧವ್ ಗಲ್ಲು ಶಿಕ್ಷೆ ಜಾರಿಗೊಳಿಸಿದರೆ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಇಸ್ಲಾಮಾಬಾದ್ ಅರಿತುಕೊಳ್ಳಬೇಕು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.