ಭಾರತ-ಪಾಕ್ ಶಾಂತಿ ಮಾತುಕತೆಯ ಪ್ರಕ್ರಿಯೆಯನ್ನು ಪುನಾರಂಭಿಸಬೇಕು: ಕಸೂರಿ
ಭಾರತ ಹಾಗೂ ಪಾಕಿಸ್ತಾನ ಶಾಂತಿ ಮಾತುಕತೆಯ ಪ್ರಕ್ರಿಯೆಯನ್ನು ಪುನರಂಭ ಮಾಡಬೇಕು ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಖುರ್ಷಿದ್ ಕಸೂರಿ ಕರೆ ನೀಡಿದ್ದಾರೆ.

Published On :
ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ಶಾಂತಿ ಮಾತುಕತೆಯ ಪ್ರಕ್ರಿಯೆಯನ್ನು ಪುನರಂಭ ಮಾಡಬೇಕು ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಖುರ್ಷಿದ್ ಕಸೂರಿ ಕರೆ ನೀಡಿದ್ದಾರೆ.
ಪಾಕಿಸ್ತಾನ ಕುಲಭೂಷಣ್ ಯಾದವ್ ಗೆ ಗಲ್ಲು ಶಿಕ್ಷೆ ವಿಧಿಸಿರುವುದರಿಂದ ಪಾಕಿಸ್ತಾನ- ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಹದಗೆಟ್ಟಿರುವ ಬೆನ್ನಲ್ಲೇ ಪಾಕ್ ವಿದೇಶಾಂಗ ಸಚಿವ ಕಸೂರಿ ಭಾರತ-ಪಾಕಿಸ್ತಾನ ಶಾಂತಿ ಮಾತುಕತೆಯ ಪ್ರಕ್ರಿಯೆಯನ್ನು ಪುನಾರಂಭ ಮಾಡಬೇಕೆಂಬ ಹೇಳಿಕೆ ನೀಡಿದ್ದಾರೆ.
ಭಾರತ-ಪಾಕಿಸ್ತಾನ ವಿಲಕ್ಷಣ ದ್ವಿಪಕ್ಷೀಯ ಸಂಬಂಧ ಹೊಂದಿದೆ. ಸೌಮ್ಯ ನಿರ್ಲಕ್ಷ್ಯ ಧೋರಣೆ ಉಪಯೋಗವಾಗುವುದಿಲ್ಲ. ವಿವಾದಗಳನ್ನು ಮುಂದುವರೆಸುವುದಕ್ಕೆ ಅವಕಾಶ ನೀಡುವುದು ಬೇಡ ಎಂದು ಸೆಂಟರ್ ಫಾರ್ ಪೀಸ್ಽ ಪ್ರೋಗ್ರೆಸ್ ಆಯೋಜಿಸಿದ್ದ ಭಾರತ-ಪಾಕ್ ಸೆಮಿನಾರ್ ನಲ್ಲಿ ಕಸೂರಿ ಹೇಳಿದ್ದಾರೆ. ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ ಎಂಬುದನ್ನು ಪಾಕಿಸ್ತಾನ ವಿದೇಶಾಂಗ ಸಚಿವ ಕಸೂರಿ ಒಪ್ಪಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
India-Pakistanಭಾರತ-ಪಾಕಿಸ್ತಾನಖುರ್ಷಿದ್ ಕಸೂರಿಶಾಂತಿ ಮಾತುಕತೆpeace processForeign Minister Khursheed Kasuriಪಾಕ್ ವಿದೇಶಾಂಗ ಸಚಿವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


