ಫಿಲಿಫೈನ್ಸ್ ನಲ್ಲಿ ಪ್ರಬಲ ಭೂಕಂಪನ; ಸುನಾಮಿ ಎಚ್ಚರಿಕೆ ರವಾನೆ
ದ್ವೀಪ ರಾಷ್ಟ್ರ ಫಿಲಿಫೈನ್ಸ್ ನಲ್ಲಿ ಶನಿವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆ ದಾಖಲಾಗಿದೆ.

ಮನಿಲಾ: ದ್ವೀಪ ರಾಷ್ಟ್ರ ಫಿಲಿಫೈನ್ಸ್ ನಲ್ಲಿ ಶನಿವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆ ದಾಖಲಾಗಿದೆ.
ದಕ್ಷಿಣ ಫಿಲಿಫೈನ್ಸ್ ನ ಮಿಂದನಾವೋ ಪ್ರಾಂತ್ಯದ 41 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಅಮೆರಿಕದ ಭೂಗರ್ಭ ಸರ್ವೇಕ್ಷಣ ಇಲಾಖಾಧಿಕಾರಿಗಳು ಸುನಾಮಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಭೂಮಿ ನಡುಗಿದ ತೀವ್ರತೆಗೆ ಅನೇಕ ಫಿಲಿಫೈನ್ಸ್ ನಲ್ಲಿ ಹಲವು ಕಟ್ಟಡಗಳು ಹಾನಿಗೊಂಡಿದ್ದು, ಆಸ್ಪತ್ರೆ ಮತ್ತು ಇತರ ಎರಡು ಸರಕಾರಿ ಕಟ್ಟಡಗಳಲ್ಲಿ ತೀವ್ರವಾದ ಬಿರುಕು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಅಂತೆಯೇ ಹಲವು ಮರಗಳು ಉರುಳಿಬಿದ್ದಿದ್ದು, ಹೆದ್ದಾರಿ ರಸ್ತೆಗಳು ಬಿರುಕು ಬಿಟ್ಟಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


