ವಿದೇಶ

ಬುರ್ಕಿನಾ ಫಾಸೊದಲ್ಲಿ ಕೆಫೆ ಮೇಲೆ ಭಯೋತ್ಪಾದಕ ದಾಳಿ: 17 ಸಾವು

ಭಯೋತ್ಪಾದಕರು ಪಶ್ಚಿಮ ಆಫ್ರಿಕಾದ ಬುರ್ಕಿನಾ ಫಾಸೋದ ಟರ್ಕಿಷ್ ಕೆಫೆ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ 17 ಮಂದಿ ಮೃತಪಟ್ಟಿದ್ದಾರೆ...

ಬುರ್ಕಿನಾ ಫಾಸೊದಲ್ಲಿ ಕೆಫೆ ಮೇಲೆ ಭಯೋತ್ಪಾದಕ ದಾಳಿ: 17 ಸಾವು
ಭಯೋತ್ಪಾದಕರ ದಾಳಿ
Published On :
ಬುರ್ಕಿನಾ ಫಾಸೋ: ಭಯೋತ್ಪಾದಕರು ಪಶ್ಚಿಮ ಆಫ್ರಿಕಾದ ಬುರ್ಕಿನಾ ಫಾಸೋದ ಟರ್ಕಿಷ್ ಕೆಫೆ  ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ 17 ಮಂದಿ ಮೃತಪಟ್ಟಿದ್ದಾರೆ. 
ಬುರ್ಕಿನಾ ಫಾಸೋದಲ್ಲಿ ಕೆಲವು ವರ್ಷಗಳಿಂದ ಇಸ್ಲಾಮಿಕ್ ಭಯೋತ್ಪಾದಕರ ಉಪಟಳ ಹೆಚ್ಚಾಗಿದ್ದು ಇದೀಗ ರೆಸ್ಟೋರೆಂಟ್ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 17 ಮಂದಿ ಮೃತಪಟ್ಟಿದ್ದು 9 ಮಂದಿಗೆ ಗಾಯಗಳಾಗಿವೆ. 
ಕಳೆದ ವರ್ಷ ಜನವರಿಯಲ್ಲೂ ಬುರ್ಕಿನಾ ಫಾಸೋದ ಕೆಫೆಯೊಂದರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಮೂವತ್ತು ಮಂದಿ ಮೃತಪಟ್ಟಿದ್ದರು. 
ಇದು ಜಿಹಾದಿಗಳ ಕೃತ್ಯ ಎಂದು ಪೊಲೀಸರು ಶಂಕಿಸಿದ್ದು, ಕೆಫೆ ಮೇಲೆ ಉಗ್ರರ ದಾಳಿ ಕುರಿತು ಮಾಹಿತಿ ಸಿಗುತ್ತಿದ್ದಂತೆ ರಕ್ಷಣಾ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದಿದ್ದು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.