ವಿದೇಶ

ಸಂಬಂಧ ಹದಗೆಡಲು ಭಾರತ ಕಾರಣ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪಾಕ್ ಪ್ರಧಾನಿ ಆರೋಪ

ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಹದಗೆಡಲು ಭಾರತ ಕಾರಣ ಎಂದು ಪಾಕಿಸ್ತಾನದ ನೂತನ ಪ್ರಧಾನಿ ಶಾಹೀದ್....

ಸಂಬಂಧ ಹದಗೆಡಲು ಭಾರತ ಕಾರಣ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪಾಕ್ ಪ್ರಧಾನಿ ಆರೋಪ
ಶಾಹೀದ್ ಖಕನ್ ಅಬ್ಬಾಸಿ
Published On :
ಇಸ್ಲಾಮಾಬಾದ್: ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಹದಗೆಡಲು ಭಾರತ ಕಾರಣ ಎಂದು ಪಾಕಿಸ್ತಾನದ ನೂತನ ಪ್ರಧಾನಿ ಶಾಹೀದ್ ಖಕನ್ ಅಬ್ಬಾಸಿ ಅವರು ಸೋಮವಾರ ಆರೋಪಿಸಿದ್ದಾರೆ.
ಇಂದು 70ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ ಅಬ್ಬಾಸಿ, ನವದೆಹಲಿಯ ವಿಸ್ತರಣಾವಾದಿ ವಿನ್ಯಾಸಗಳಿಂದ ಉಭಯ ದೇಶಗಳ ರಚನಾತ್ಮಕ ಸಂಬಂಧಕ್ಕೆ ಪ್ರಮುಖ ಅಡಚಣೆಯಾಗಿದೆ ಎಂದಿದ್ದಾರೆ.
ಸಾರ್ವಭೌಮ ಸಮಾನತೆಯ ಆಧಾರದ ಮೇಲೆ ಪಾಕಿಸ್ತಾನ ಎಲ್ಲಾ ದೇಶಗಳೊಂದಿಗೆ ಧನಾತ್ಮಕ ಮತ್ತು ರಚನಾತ್ಮಕ ಸಂಬಂಧಗಳನ್ನು ಬಯಸುತ್ತದೆ ಎಂದು ಪಾಕ್ ಪ್ರಧಾನಿ ಹೇಳಿದ್ದಾರೆ.
ನಮ್ಮ ಸರ್ಕಾರ ಭಾರತದೊಂದಿಗೆ ಅರ್ಥಪೂರ್ಣ ಮಾತುಕತೆ ನಡೆಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಶಾಂತಿಯುತ ವಿಧಾನಗಳನ್ನು ಅನುಸರಿಸಿದೆ. ಆದರೆ ದುರದೃಷ್ಟವಶಾತ್ ಭಾರತದ ವಿಸ್ತರಣಾವಾದಿ ಸಿದ್ಧಾಂತ ಇದಕ್ಕೆ ಅಡ್ಡಿಯಾಗಿದೆ ಎಂದು ಅಬ್ಬಾಸಿ ಹೇಳಿದ್ದಾರೆ.
ಈ ವೇಳೆ 70ನೇ ಸ್ವಾತಂತ್ರ್ಯೋತ್ಸವದ ವಿಶೇಷ ಅತಿಥಿಯಾಗಿ ಚೀನಾದ ಉಪ ಪ್ರಧಾನಿ ವಾಂಗ್ ಯಾಂಗ್ ಅವರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.