ವಿದೇಶ

ಭಯೋತ್ಪಾದನೆ ಕುರಿತು ಅಮೆರಿಕ ಎಚ್ಚರಿಕೆ: ಪಾಕ್ ಬೆಂಬಲಕ್ಕೆ ನಿಂತ ಚೀನಾ

ಉಗ್ರರನ್ನು ಹತ್ತಿಕ್ಕದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನಕ್ಕೆ ಅಮೆರಿಕ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಎಂದಿನಂತೆ ಚೀನಾ ತನ್ನ ನೆಚ್ಚಿನ ಮಿತ್ರ ರಾಷ್ಟ್ರ ಪಾಕಿಸ್ತಾನದ ಬೆಂಬಲಕ್ಕೆ ನಿಂತಿದೆ...

ಭಯೋತ್ಪಾದನೆ ಕುರಿತು ಅಮೆರಿಕ ಎಚ್ಚರಿಕೆ: ಪಾಕ್ ಬೆಂಬಲಕ್ಕೆ ನಿಂತ ಚೀನಾ
ಸಂಗ್ರಹ ಚಿತ್ರ
Published On :
ಬೀಜಿಂಗ್: ಉಗ್ರರನ್ನು ಹತ್ತಿಕ್ಕದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನಕ್ಕೆ ಅಮೆರಿಕ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಎಂದಿನಂತೆ ಚೀನಾ ತನ್ನ ನೆಚ್ಚಿನ ಮಿತ್ರ ರಾಷ್ಟ್ರ ಪಾಕಿಸ್ತಾನದ ಬೆಂಬಲಕ್ಕೆ ನಿಂತಿದೆ. 
ನಿನ್ನೆಯಷ್ಟೇ ಅಮೆರಿಕದ ಮೂರು ಸೇನೆಗಳ ಮಹಾದಂಡ ನಾಯಕನ ನೆಲೆಯಲ್ಲಿ ಇದೇ ಮೊದಲ ಬಾರಿಗೆ ದೇಶವನ್ನುದ್ದೇಶಿ ಮಾತನಾಡಿದ್ದ ಟ್ರಂಪ್, ಪಾಕಿಸ್ತಾನದ ವಿಷಯದಲ್ಲಿ ಅಮೆರಿಕದ ಹೊಸ ನೀತಿಯಲ್ಲಿ ಬದಲಾವಣೆಯಾಗಿದೆ. 
ಉಗ್ರ ಸಂಘಟನೆಗಳಿಗೆ ಸುರಕ್ಷಿತ ತಾಣಾವಾಗಿರುವ ಪಾಕಿಸ್ತಾನದ ಬಗ್ಗೆ ಇನ್ನೂ ಮೌನವಾಗಿರಲು ಸಾಧ್ಯವಿಲ್ಲ. ಅಫ್ಘಾನಿಸ್ತಾನದಲ್ಲಿ ಶಾಂತಿ, ಸ್ಥಿರತೆ ಸೃಷ್ಟಿಸುವಲ್ಲಿ ಭಾರತದ ಕೊಡುಗೆಗಳನ್ನು ಮೆಚ್ಚುತ್ತೇವೆ. ಉಗ್ರರನ್ನು ಪಾಕಿಸ್ತಾನ ಹತ್ತಿಕ್ಕದೇ ಹೋದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. 
ಟ್ರಂಪ್ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ, ಭಯೋತ್ಪಾದನೆ ವಿರುದ್ದದ ಹೋರಾಟದಲ್ಲಿ ಪಾಕಿಸ್ತಾನ ಮುಂಚೂಣಿಯಲ್ಲಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ಪಾತ್ರವನ್ನೂ ಪರಿಗಣಿಸಬೇಕಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.