ಭಾರತಕ್ಕೆ ಹೋಗದಿರಿ: ತನ್ನ ದೇಶದ ನಾಗರೀಕರಿಗೆ ಚೀನಾ ಎಚ್ಚರಿಕೆ
ಡೋಕ್ಲಾಮ್ ವಿವಾದ ಸಂಬಂಧ ಪದೇ ಪದೇ ಆಕ್ರಮಣಕಾರಿ ರೀತಿಯಲ್ಲಿಯೇ ವರ್ತಿಸುತ್ತಿರುವ ಚೀನಾ, ಭಾರತಕ್ಕೆ ತೆರಳದಂತೆ ತನ್ನ ದೇಶದ ನಾಗರಿಕರಿಗೆ ಮತ್ತೆ ಎಚ್ಚರಿಕೆಯನ್ನು ನೀಡಿದೆ...

Published On :
ಬೀಜಿಂಗ್: ಡೋಕ್ಲಾಮ್ ವಿವಾದ ಸಂಬಂಧ ಪದೇ ಪದೇ ಆಕ್ರಮಣಕಾರಿ ರೀತಿಯಲ್ಲಿಯೇ ವರ್ತಿಸುತ್ತಿರುವ ಚೀನಾ, ಭಾರತಕ್ಕೆ ತೆರಳದಂತೆ ತನ್ನ ದೇಶದ ನಾಗರಿಕರಿಗೆ ಮತ್ತೆ ಎಚ್ಚರಿಕೆಯನ್ನು ನೀಡಿದೆ.
ಡೋಕ್ಲಾಮ್ ವಿವಾದ ಸಂಬಂಧ ಭಾರತದ ವಿರುದ್ಧ ಚೀನಾ ಸಮರೋತ್ಸಾಹ ತೋರುತ್ತಿದ್ದು, ಕಳೆದೆರಡು ತಿಂಗಳುಗಳಿಂದ ಭಾರತಕ್ಕೆ ತೆರಳದಂತೆ ಎರಡು ಬಾರಿ ತನ್ನ ನಾಗರೀಕರಿಗೆ ಚೀನಾ ಎಚ್ಚರಿಕೆ ನೀಡಿದೆ. ಆದರೆ, ಅಭದ್ರತೆಗೆ ಗಡಿ ತಂಟೆಯ ವಿಷಯವನ್ನು ಎತ್ತದಿರುವ ಚೀನಾ, ನೈಸರ್ಗಿಕ ವಿಕೋಪಗಳು, ರೈಲು ದುರಂತ ಹಾಗೂ ಕಾಯಿಲೆಗಳ ಕಾರಣಗಳನ್ನು ನೀಡಿದೆ.
ಕಳೆದ ಮೂರು ತಿಂಗಳಿನಿಂದ ಭಾರತ–ಚೀನಾ ಗಡಿಯ ಸಿಕ್ಕಿಂ ವಲಯದಲ್ಲಿ ಸಂಘರ್ಷ ನಡೆಯುತ್ತಿದ್ದು, ಗಡಿ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಚೀನೀ ಸೈನಿಕರು ಅಲ್ಲಿ ಇದ್ದ ಭಾರತೀಯ ಬಂಕರ್ ಗಳನ್ನು ನಾಶ ಮಾಡಿದ್ದರು. ಇದೇ ಕಾರಣಕ್ಕೆ ಗಡಿ ಗಸ್ತು ನಡೆಸುವ ಯೋಧರಿಗೆ ಬೆಂಬಲವಾಗಿ ಇನ್ನಷ್ಟು ಸೈನಿಕರನ್ನು ಕಳುಹಿಸಲಾಗಿತ್ತು. ಯುದ್ಧ ಮಾಡುವ ಉದ್ದೇಶಕ್ಕೆ ಅಲ್ಲ ಎಂದು ಭಾರತ ಸ್ಪಷ್ಟಪಡಿಸಿತ್ತು. ಜೂನ್ 16 ಘಟನೆ ಬಳಿಕ ಇಂಡೋ-ಚೀನಾ ಗಡಿ ಪ್ರಕ್ಷುಬ್ದಗೊಂಡಿದೆ.
ಭಾರತದ ಗಡಿ ರಕ್ಷಣಾ ದೃಷ್ಟಿಯಿಂದ ಭೂತಾನ್ ನೊಂದಿಗೆ ಒಪ್ಪಂದ ಮಾಡಿಕೊಂಡಿರುವ ಭಾರತ ಸಿಲಿಗುರಿ ಕಾರಿಡಾರ್ ನಿರ್ಮಿಸುತ್ತಿದೆ. ಒಂದು ವೇಳೆ ಈ ಕಾರಿಡಾರ್ ಪೂರ್ಣಗೊಂಡಿದ್ದೇ ಆದರೆ ಗಡಿಯಲ್ಲಿ ಚೀನಿ ಸೈನಿಕರು ಏನೇ ಯೋಜನೆ ರೂಪಿಸಿದರೂ ಭಾರತಕ್ಕೆ ಆದರ ಮಾಹಿತಿ ಲಭ್ಯವಾಗುತ್ತದೆ. ಇನ್ನು ಇದೇ ಕಾರಿಡಾರ್ ಗೆ ಹೊಂದಿಕೊಂಡಂತೆ ಭಾರತೀಯ ಪಡೆಗಳ ಶಿಬಿರವಿದ್ದು, ಇದೇ ಕಾರಣಕ್ಕೆ ಚೀನಾ ಕೂಡ ಡೋಕ್ಲಾಮ್ ಸಮೀಪದಲ್ಲೇ ದಿಢೀರ್ ರಸ್ತೆ ನಿರ್ಮಾಣಕ್ಕೆ ಮುಂದಾಗಿತ್ತು. ಇದನ್ನು ಯಾವಾಗ ಭಾರತೀಯ ಸೈನಿಕರು ವಿರೋಧಿಸಿದರೋ ಆಗ ಚೀನೀ ಸೈನಿಕರು ಕಾಲುಕೆರೆದು ಸಂಘರ್ಷಕ್ಕೆ ಮುಂದಾಗಿದ್ದಾರೆ.
ಗಡಿಯಲ್ಲಿ ವಿವಾದ ತಾರಕ್ಕೇರಿದ್ದಾಗಿನಿಂದಲೂ ಭಾರತವನ್ನು ಬೆದರಿಸುವ ಪ್ರಯತ್ನಗಳನ್ನು ಚೀನಾ ಮಾಡುತ್ತಲೇ ಬಂದಿದೆ. ಡೋಕ್ಲಾಮ್ ವಿವಾದ ಸಂಬಂಧ ಕೆಲ ತಿಂಗಳಿನಿಂದಲೂ ಭಾರತ ಹಾಗೂ ಚೀನಾ ನಡುವೆ ವಾಕ್ಸಮರ ಮುಂದುವರೆಯುತ್ತಲೇ ಇದೆ.
ಡೋಕ್ಲಾಮ್ ವಿವಾದದಲ್ಲಿ ಚೀನಾ ಗರಿಷ್ಟ ಸಂಯಮವನ್ನು ತೋರಿಸಿದೆ. ಆದರೆ, ಇದೀಗ ನಮ್ಮ ತಾಳ್ಮೆಯ ಕಟ್ಟೆಯೊಡೆದಿದೆ. ಭಾರತ ಇದನ್ನು ತಿಳಿಯಬೇಕಿದ್ದು, ಮೊದಲು ಡೋಕ್ಲಾಮ್ ನಿಂದ ತನ್ನ ಸೇನಾಪಡೆಗಳನ್ನು ಭಾರತ ಹಿಂದಕ್ಕೆ ಕರೆಸಿಕೊಳ್ಳಬೇಕು. ಇಲ್ಲದೇ ಹೋದರೆ, ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಚೀನಾ ಈ ಹಿಂದೆ ಭಾರತಕ್ಕೆ ಬೆದರಿಕೆ ಹಾಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


