ವಿದೇಶ

ಬೆನಜೀರ್ ಭುಟ್ಟೊ ಹತ್ಯೆ ಪ್ರಕರಣ: ಇಬ್ಬರಿಗೆ 17 ವರ್ಷ ಜೈಲು; ಮುಷರ್ರಫ್ ನಾಪತ್ತೆ

ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಬೆನಜೀರ್ ಭುಟ್ಟೊ ಅವರ ಹತ್ಯೆಯ ಪ್ರಕರಣದಲ್ಲಿ ಇಬ್ಬರು ಜೈಲು ಶಿಕ್ಷೆಗೆ ಗುರಿಯಾಗಿದ್ದು ಐದು ಜನರನ್ನು ಖುಲಾಸೆಗೊಳಿಸಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬೆನಜೀರ್ ಭುಟ್ಟೊ ಹತ್ಯೆ ಪ್ರಕರಣ: ಇಬ್ಬರಿಗೆ 17 ವರ್ಷ ಜೈಲು; ಮುಷರ್ರಫ್ ನಾಪತ್ತೆ
ಬೆನಜೀರ್ ಭುಟ್ಟೊ
Published On :
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಬೆನಜೀರ್ ಭುಟ್ಟೊ ಅವರ ಹತ್ಯೆಯ ಪ್ರಕರಣದಲ್ಲಿ ಇಬ್ಬರು ಜೈಲು ಶಿಕ್ಷೆಗೆ ಗುರಿಯಾಗಿದ್ದು ಐದು ಜನರನ್ನು ಖುಲಾಸೆಗೊಳಿಸಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರಕರಣದ ಸಂಬಂಧ  ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಮಾಜಿ ಸೇನಾ ಆಡಳಿತಗಾರ ಪರ್ವೇಜ್ ಮುಷರ್ರಫ್ ರನ್ನು ನಾಪತ್ತೆಯಾಗಿರುವವರ ಸಾಲಿಗೆ ಸೇರಿಸಲಾಗಿದೆ.  ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಮುಷರ್ರಫ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶ ನೀಡಿದೆ ಎಂದು ನ್ಯಾಯಾಲಯದ ಅಧಿಕಾರಿ ತಿಳಿಸಿದ್ದಾರೆ.
2007 ರಲ್ಲಿ ನಡೆದ ಭುಟ್ಟೋ ಅವರ ಹತ್ಯಾ ಪ್ರಕರಣದಲ್ಲಿ 2013ರಲ್ಲಿ  ಮುಷರ್ರಫ್ ಅವರನ್ನು ಅಪರಾಧಿ ಎಂದು ಪರಿಗಣಿಸಲಾಗಿತ್ತು. ಆದರೆ ಮುಷರ್ರಫ್ ಅಷ್ಟರಲ್ಲೇ ದುಬೈ ಗೆ ಪರಾರಿಯಾಗಿದ್ದರು. ಮೂರು ವರ್ಷದ ಬಳಿಕ ಅವರಿಗೆ ವಿಧಿಸಿದ್ದ ಬಹಿಷ್ಕಾರ ಶಿಕ್ಷೆ ತೆಗೆದುಹಾಕಿದ್ದಾಗಲೂ ಮುಷರ್ರಫ್ ಪಾಕಿಸ್ತಾನಕ್ಕೆ ಹಿಂತಿರುಗಿರಲಿಲ್ಲ. 
2007 ರ ಡಿಸೆಂಬರ್ 27 ರಂದು ರಾವಲ್ಪಿಂಡಿಯ ಲಿಯಾಖತ್ ಭಾಗ್ ನಲ್ಲಿ ನಡೆದ ಗಲಭೆ ಮತ್ತು ಬಾಂಬ್ ದಾಳಿಯಲ್ಲಿ ಎರಡು ಬಾರಿ ಪಾಕಿಸ್ತಾನದ ಪ್ರಧಾನಮಂತ್ರಿ ಆಗಿದ್ದ ಬೆನಜೀರ್ ಭುಟ್ಟೋನನ್ನು ಹತ್ಯೆ ಮಾಡಲಾಗಿತ್ತು..

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.