ಪಾಕಿಸ್ತಾನ: ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲಿರುವ ಭಯೋತ್ಪಾದಕ!
ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದವಾದ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿನ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲಿದ್ದಾನೆ.

Published On :
ಲಾಹೋರ್: ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದವಾದ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿನ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲಿದ್ದಾನೆ.
ಮುಂದಿನ ವರ್ಷ ನಡೆಯಲಿರುವ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸುವುದರ ಬಗ್ಗೆ ಹಫೀಜ್ ಸಯೀದ್ ಸ್ವತಃ ಹೇಳಿಕೆ ನೀಡಿದ್ದು, ಮಿಲ್ಲಿ ಮುಸ್ಲಿಂ ಲೀಗ್(ಎಂಎಂಎಲ್) ಮೂಲಕ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ್ದಾನೆ. ಆದರೆ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತನೆ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.
ರಾಜಕೀಯ ಪ್ರವೇಶದ ಉದ್ದೇಶ ಹೊಂದಿದ್ದ ಹಫೀಜ್ ಸಯೀದ್ ನ ಜೆಯುಡಿ ಉಗ್ರ ಸಂಘಟನೆ ಆಗಸ್ಟ್ ತಿಂಗಳಲ್ಲಿ ಮಿಲ್ಲಿ ಮುಸ್ಲಿಂ ಲೀಗ್ ಪಕ್ಷವನ್ನು ಸ್ಥಾಪಿಸಿತ್ತು. ಈ ವರ್ಷ ಜನವರಿಯಲ್ಲಿ ಬಂಧನಕ್ಕೊಳಗಾಗಿದ್ದ ಭಯೋತ್ಪಾದಕ ಹಫೀಜ್ ಸಯೀದ್, ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


