ಹಣ್ಣು ಕದ್ದಿದ್ದಕ್ಕೆ ಇಸ್ರೇಲ್ ಕಮಾಂಡರ್‌ಗೆ ಅಮಾನತು ಶಿಕ್ಷೆ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೆರುಸಲೇಂನ್ನು ಇಸ್ರೇಲ್ ರಾಜಧಾನಿ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ...

Published On :
ಜೆರುಸಲೇಂ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೆರುಸಲೇಂನ್ನು ಇಸ್ರೇಲ್ ರಾಜಧಾನಿ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಸೇನಾ ಸಿಬ್ಬಂದಿ ನಿಯೋಜಿಸಲಾಗಿತ್ತು. ಈ ವೇಳೆ ರಸ್ತೆ ಬದಿಯಲ್ಲಿದ್ದ ತಳ್ಳೋ ಗಾಡಿಯಲ್ಲಿದ್ದ ಹಣ್ಣುಗಳನ್ನು ಕದ್ದಿದ್ದಾರೆ.
ಪ್ಯಾಲೆಸ್ತೈನ್ ವ್ಯಾಪಾರಿಯ ಹಣ್ಣನ್ನು ಕದ್ದ ಕಾರಣ ಹೆಬ್ರಾನ್ ನ ಪಶ್ಚಿಮ ಪ್ರದೇಶದಲ್ಲಿ ಸೇನಾ ಕಮಾಂಡರ್ ಅನ್ನು ಅಮಾನತು ಮಾಡಲಾಗಿದೆ.
ಕಮಾಂಡರ್ ಹಣ್ಣನ್ನು ಕದಿಯುತ್ತಿರುವ ದೃಶ್ಯಗಳನ್ನು ಪ್ಯಾಲೆಸ್ತೈನ್ ವ್ಯಕ್ತಿಯೊಬ್ಬ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಈ ವಿಡಿಯೋವನ್ನು ಆಧಾರವಾಗಿಟ್ಟುಕೊಂಡು ಕಮಾಂಡರ್ ನನ್ನು ಅಮಾನತು ಮಾಡಲಾಗಿದೆ.
ವಿಡಿಯೋದಲ್ಲಿ ಕಮಾಂಡರ್ ಹಣ್ಣಗಳನ್ನು ಕದ್ದು ಸೈನಿಕರಿಗೆ ನೀಡಿರುವ ದೃಶ್ಯಗಳು ಸೆರೆಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಇಸ್ರೇಲ್suspendedಅಮಾನತುIsraeliPalestineArmy Commanderಸೇನಾ ಕಮಾಂಡರ್Stealing Fruitಹಣ್ಣು ಕದ್ದುಪ್ಯಾಲಸ್ತೈನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


