ವಿದೇಶ

ತಾಯಿ, ಪತ್ನಿ ಭೇಟಿಗೆ ಅವಕಾಶ ಕಲ್ಪಿಸಿದ ಪಾಕ್ ಗೆ ಕುಲಭೂಷಣ್ ಜಾಧವ್ ಕೃತಜ್ಞತೆ

ಭಾರತದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಕಳೆದ ವರ್ಷ ಮಾರ್ಚ್ 3ರಂದು ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾದ....

ತಾಯಿ, ಪತ್ನಿ ಭೇಟಿಗೆ ಅವಕಾಶ ಕಲ್ಪಿಸಿದ ಪಾಕ್ ಗೆ ಕುಲಭೂಷಣ್ ಜಾಧವ್ ಕೃತಜ್ಞತೆ
ಕುಲಭೂಷಣ್ ಜಾಧವ್
Published On :
ಇಸ್ಲಾಮಾಬಾದ್: ಭಾರತದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಕಳೆದ ವರ್ಷ ಮಾರ್ಚ್ 3ರಂದು ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾದ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು ಇದೇ ಮೊದಲ ಬಾರಿಗೆ ತಮ್ಮ ತಾಯಿ ಮತ್ತು ಪತ್ನಿಯನ್ನು ಭೇಟಿ ಮಾಡಿದ್ದು, ಈ ಅವಕಾಶ ಕಲ್ಪಿಸಿದ ಪಾಕ್ ಗ ಕೃತಜ್ಞತೆ ಸಲ್ಲಿಸಿದ್ದಾರೆ.
ಪಾಕ್ ಸೇನಾ ಕೋರ್ಟ್ ನಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು ಅವರ ಪತ್ನಿ ಮತ್ತು ತಾಯಿ ಭೇಟಿ ಮಾಡಿದ ಬಳಿಕ ಪಾಕಿಸ್ತಾನ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 'ನಾನು ನನ್ನ ಪತ್ನಿ ಮತ್ತು ತಾಯಿ ಭೇಟಿ ಮಾಡಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದೆ. ಅದರಂತೆ ಇಂದು ಪತ್ನಿ ಹಾಗೂ ತಾಯಿ ಭೇಟಿಗೆ ಅವಕಾಶ ಕಲ್ಪಿಸಿದ ಪಾಕಿಸ್ತಾನಕ್ಕೆ ಧನ್ಯವಾದ' ಎಂದು ಜಾಧವ್ ಹೇಳಿದ್ದಾರೆ.
ಕುಲಭೂಷಣ್​ ಜಾಧವ್​ಅವರು ಸೋಮವಾರ ಗಾಜಿನ ತಡೆಗೋಡೆ ಮಧ್ಯೆ ತಮ್ಮ ತಾಯಿ ಮತ್ತು ಪತ್ನಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇಸ್ಲಾಮಾಬಾದ್​ನಲ್ಲಿರುವ ಪಾಕ್​ವಿದೇಶಾಂಗ ಸಚಿವಾಲಯದ ಕಚೇರಿಯಲ್ಲಿ ಭೇಟಿಗೆ ವ್ಯವಸ್ಥೆ ಮಾಡಲಾಗಿತ್ತು. ಇಂದು ಮಧ್ಯಾಹ್ನ 1.35ಕ್ಕೆ ಭೇಟಿಗೆ ಅವಕಾಶ ಮಾಡಿಕೊಡಲಾಯಿತು. ಸುಮಾರು 30 ನಿಮಿಷಗಳ ಕಾಲ ಜಾಧವ್,​ ತಾಯಿ ಮತ್ತು ಪತ್ನಿ ಜೊತೆ ಮಾತುಕತೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.