ವಿಧಾನಸಭಾ ಚುನಾವಣೆಗಳ ಬಳಿಕ ದ್ವಿಪಕ್ಷೀಯ ಮಾತುಕತೆ ಸಾಧ್ಯ: ಪಾಕ್ ವಿಶ್ವಾಸ
ಪಂಚರಾಜ್ಯಗಳ ಚುನಾವಣೆ ಬಳಿಕ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಪಾಕಿಸ್ತಾನದ ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.

Published On :
ಇಸ್ಲಾಮಾಬಾದ್: ಪಂಚರಾಜ್ಯಗಳ ಚುನಾವಣೆ ಬಳಿಕ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಪಾಕಿಸ್ತಾನದ ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.
"ಮಾರ್ಚ್ ವೇಳೆಗೆ ಭಾರತದಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯಗೊಳ್ಳಲಿದ್ದು, ನಂತರದ ದಿನಗಳಲ್ಲಿ ಪಾಕಿಸ್ತಾನ- ಭಾರತ ದ್ವಿಪಕ್ಷೀಯ ಮಾತುಕತೆ ನಡೆಸಲು ಸಾಧ್ಯವಾಗಲಿದೆ, ಪಾಕಿಸ್ತಾನ ಮಾತ್ರ ಮಾತುಕತೆ ನಡೆಸುವುದಕ್ಕೆ ಬದ್ಧವಾಗಿದೆ ಎಂದು ಯೋಜನಾ ಮತ್ತು ಅಭಿವೃದ್ಧಿ ಸಚಿವ ಇಕ್ಬಾಲ್ ಹೇಳಿದ್ದಾರೆ.
ಶಾಂತಿಗೆ ಸಂಬಂಧಿಸಿದ ಅಮೆರಿಕಾದ ಥಿಂಕ್ ಟ್ಯಾಂಕ್ ನ ಪ್ರಶ್ನೆಗೆ ಉತ್ತರಿಸಿರುವ ಇಕ್ಬಾಲ್, ಭಾರತದ ವಿಧಾನಸಭಾ ಚುನಾವಣೆಗಳಲ್ಲಿ ಪಾಕಿಸ್ತಾನ ಚುನಾವಣಾ ವಿಷಯವಾಗುವುದಿಲ್ಲ. ಪಾಕಿಸ್ತಾನದಲ್ಲಿ ನಡೆಯುವ ಚುನಾವಣೆಗಳಲ್ಲಿ ಭಾರತದ ಪ್ರಸ್ತಾಪವಾಗುವುದಿಲ್ಲ. ಆದರೆ ಭಾರತದ ಚುನಾವಣೆಗಳಲ್ಲಿ ಪಾಕಿಸ್ತಾನ ಚುನಾವಣಾ ವಿಷಯವಾಗಿರಬಹುದು ಎನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಚುನಾವಣೆ ನಡೆದರೆ ಪಾಕಿಸ್ತಾನ ಚುನಾವಣಾ ವಿಷಯವಾಗಿರಲಿದೆ. ಆದ್ದರಿಂದ ವಿಧಾನಸಭಾ ಚುನಾವಣೆ ನಂತರ ಮಾತುಕತೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಬಹುದೆಂದು ಸಚಿವ ಇಕ್ಬಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


