ವಿದೇಶ

ಹಿಂದೂ ಮಹಾಸಾಗರದಲ್ಲಿ ಹೆಚ್ಚುತ್ತಿರುವ ಅಣುಶಕ್ತಿಯ ಬಗ್ಗೆ ಪಾಕಿಸ್ತಾನಕ್ಕೆ ಆತಂಕ

ಹಿಂದೂ ಮಹಾಸಾಗರದಲ್ಲಿ ಅಣ್ವಸ್ತ್ರ ಶಕ್ತಿ ಹೆಚ್ಚುತ್ತಿರುವುದರ ಬಗ್ಗೆ ಪಾಕಿಸ್ತಾನ ಆತಂಕ ವ್ಯಕ್ತಪಡಿಸಿದ್ದು, ಭಾರತದಿಂದ ಹೆಚ್ಚುತ್ತಿರುವ ಅಣ್ವಸ್ತ್ರ ಶಕ್ತಿಯ ಅಪಾಯಗಳನ್ನು ನಿಗ್ರಹಿಸುವುದಾಗಿ ವಿಶ್ವಾಸ ವ್ಯಕ್ತಪದಿಸಿದೆ.

ಹಿಂದೂ ಮಹಾಸಾಗರದಲ್ಲಿ ಹೆಚ್ಚುತ್ತಿರುವ ಅಣುಶಕ್ತಿಯ ಬಗ್ಗೆ ಪಾಕಿಸ್ತಾನಕ್ಕೆ ಆತಂಕ
Published On :
ಇಸ್ಲಾಮಾಬಾದ್: ಹಿಂದೂ ಮಹಾಸಾಗರದಲ್ಲಿ ಅಣ್ವಸ್ತ್ರ ಶಕ್ತಿ ಹೆಚ್ಚುತ್ತಿರುವುದರ ಬಗ್ಗೆ ಪಾಕಿಸ್ತಾನ ಆತಂಕ ವ್ಯಕ್ತಪಡಿಸಿದ್ದು, ಭಾರತದಿಂದ ಹೆಚ್ಚುತ್ತಿರುವ ಅಣ್ವಸ್ತ್ರ ಶಕ್ತಿಯ ಅಪಾಯಗಳನ್ನು ನಿಗ್ರಹಿಸುವುದಾಗಿ ವಿಶ್ವಾಸ ವ್ಯಕ್ತಪದಿಸಿದೆ. 
ವಿದೇಶಿ ಸೇನೆಯ ಸೇನಾ ಬಲ, ಸಮೂಹ ನಾಶಕ ಶಸ್ತ್ರಾಸ್ತ್ರಗಳ ಪ್ರಸರಣ, ಕ್ಷಿಪಣಿ ಶಕ್ತಿ ಹೆಚ್ಚುತ್ತಿರುವುದು ಹಿಂದೂ ಮಹಾಸಾಗರದಲ್ಲಿ ಶಾಂತಿಗೆ ಧಕ್ಕೆ ಉಂಟು ಮಾಡುತ್ತಿದೆ. ಇದರೊಂದಿಗೆ ಅಕ್ರಮ ಮೀನುಗಾರಿಕೆ, ಮಾನವ ಕಳ್ಳ ಸಾಗಣೆ, ಶಸ್ತ್ರಾಸ್ತ್ರ ಕಳ್ಳ ಸಾಗಣೆ ಹವಾಮಾನ ಬದಲಾವಣೆ ಸೇರಿದಂತೆ ಹಲವು ಸಮಸ್ಯೆಗಳೂ ಎದುರಾಗಿದ್ದು ಪಾಕಿಸ್ತಾನ ಅವುಗಳನ್ನು ಸಮರ್ಥವಾಗಿ ಎದುರಿಸಲಿದೆ ಎಂದು ಪಾಕ್ ನ ವಿದೇಶಾಂಗ ಇಲಾಖೆ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ. 
ಮೇಲಿನ ಎಲ್ಲಾ ಆತಂಕಗಳೂ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹಿಂದೂ ಮಹಾಸಾಗರಕ್ಕೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಕಡಲ ಕಾನ್ಫರೆನ್ಸ್ ನಲ್ಲಿ ಹೇಳಿದ್ದು, ಹಿಂದೂ ಮಹಾಸಾಗರ ಪ್ರದೇಶದ ಭದ್ರತಾ ಹಾಗೂ ಶಾಂತಿಯ ವಿಷಯದಲ್ಲಿ ಪಾಕಿಸ್ತಾನ ಪ್ರಮುಖ ಕಾರ್ಯತಂತ್ರ ಪಾಲುದಾರಿಕೆ ಹೊಂದಿದೆ ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.