ಕರಾಚಿ: ದೃಶ್ಯ ಮಾಧ್ಯಮ ವಾಹನದ ಮೇಲೆ ದಾಳಿ, ಓರ್ವ ಪತ್ರಕರ್ತ ಸಾವು
ದೃಶ್ಯ ಮಾಧ್ಯಮದ ವಾಹನವೊಂದರ ಮೇಲೆ ಶಂಕಿತ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಪತ್ರಕರ್ತ ಸಾವನ್ನಪ್ಪಿರುವ ಘಟನೆಯೊಂದು ಭಾನುವಾರ ತಡರಾತ್ರಿ ನಡೆದಿದೆ...

ಕರಾಚಿ: ದೃಶ್ಯ ಮಾಧ್ಯಮದ ವಾಹನವೊಂದರ ಮೇಲೆ ಶಂಕಿತ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಪತ್ರಕರ್ತ ಸಾವನ್ನಪ್ಪಿರುವ ಘಟನೆಯೊಂದು ಭಾನುವಾರ ತಡರಾತ್ರಿ ನಡೆದಿದೆ.
ಪೊಲೀಸ್ ವಾಹನದ ಮೇಲೆ ನಡೆದ ಗ್ರೆನೇಡ್ ದಾಳಿ ಘಟನೆಯನ್ನು ಸುದ್ದಿ ಮಾಡಲೆಂದು 'ಸಮಾ' ಟಿವಿ ಮಾಧ್ಯಮದ ಪತ್ರಕರ್ತರು ವಾಹನದಲ್ಲಿ ಹೋಗುತ್ತಿದ್ದರು.
ಈ ವೇಳೆ ಮುಸುಕುಧಾರಿಯಾಗಿ ದ್ವಿಚಕ್ರ ವಾಹನದಲ್ಲಿ ಬಂದಿರುವ ಶಂಕಿತ ಉಗ್ರನೊಬ್ಬ ಏಕಾಏಕಿ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಓರ್ವ ಪತ್ರಕರ್ತ ಸಾವನ್ನಪ್ಪಿದ್ದು, ಕ್ಯಾಮೆರಾಮೆನ್ ಗಂಭೀರವಾಗಿ ಗಾಯಗೊಂಡಿದ್ದಾನೆಂದು ತಿಳಿದುಬಂದಿದೆ. ಗಾಯಾಳು ಕ್ಯಾಮೆರಾಮೆನ್ ನ್ನು ಕೂಡಲೇ ಶಹೀದ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯನ್ನು ಕರಾಜಿ ಉಪ ಮೇಯರ್ ಖಂಡಿಸಿದ್ದು, ಕೆಲ ಭಯೋತ್ಪಾದನಾ ಚಟುವಟಿಕೆಗಳು ಮೆಟ್ರೋಪಾಲಿಟನ್ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದು ನಗರದಲ್ಲಿ ಅರಾಜಕತೆಯನ್ನು ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


