ಪಾಕಿಸ್ತಾನ: ಕೋರ್ಟ್ ಆವರಣದಲ್ಲಿ ಸರಣಿ ಆತ್ಮಾಹುತಿ ಬಾಂಬ್ ದಾಳಿ, 6 ಸಾವು, 14 ಗಾಯ
ಪಾಕಿಸ್ತಾನದ ಕೋರ್ಟ್ ವೊಂದರ ಬಳಿ ಆತ್ಮಾಹುತಿ ಬಾಂಬ್ ದಾಳಿ ಸಂಭವಿಸಿದ್ದು ಈ ಪೈಕಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ...

Published On :
ಪೇಶಾವರ: ಪಾಕಿಸ್ತಾನದ ಕೋರ್ಟ್ ವೊಂದರ ಬಳಿ ಆತ್ಮಾಹುತಿ ಬಾಂಬ್ ದಾಳಿ ಸಂಭವಿಸಿದ್ದು ಈ ಪೈಕಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕಿಸ್ತಾನದ ಚಾರ್ಸಡ್ಡಾ ನಗರದ ನ್ಯಾಯಾಲಯದ ಆವರಣದಲ್ಲಿ ಓರ್ವ ಆತ್ಮಾಹುತಿ ಕೋರ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಮತ್ತೊರ್ವ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಸೋಹಿಲ್ ಖಲೀದ್ ಹೇಳಿದ್ದಾರೆ.
ಜಮಾತ್-ಉರ್-ಅರಾರ್ ವಕ್ತಾರ ಅಸಾದ್ ಮನ್ಸೂರ್ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಹೊತ್ತಿಕೊಂಡಿದ್ದಾನೆ. ಈ ಆತ್ಮಾಹುತಿ ಬಾಂಬ್ ದಾಳಿ ಮೂಲಕ ಪತ್ರಕರ್ತರಿಗೆ ಸಂದೇಶ ರವಾನಿಸಿದ್ದೇನೆ. ನ್ಯಾಯಾಲಯದ ಆವರಣದಲ್ಲಿ ಇನ್ನಷ್ಟು ಆತ್ಮಾಹುತಿ ಬಾಂಬ್ ದಾಳಿಗಳು ನಡೆಯಲಿವೆ ಎಂದು ಹೇಳಿದ್ದಾನೆ.
ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಪಾಕಿಸ್ತಾನದಲ್ಲಿ ಕಳೆದ 10 ದಿನಗಳಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 100ಕ್ಕೂ ಹೆಚ್ಚು ಅಮಾಯಕರು ಪ್ರಾಣವನ್ನು ಕಳೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


