ಬಾಗ್ದಾದ್'ನಲ್ಲಿ ಕಾರ್ ಬಾಂಬ್ ಸ್ಫೋಟ: 7 ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ
ಇರಾಕ್ ರಾಜಧಾನಿ ಬಾಗ್ದಾದ್'ನಲ್ಲಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿ 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ...

ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್'ನಲ್ಲಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿ 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.
ಪಶ್ಚಿಮ ಬಾಗ್ದಾದ್'ನ ಅಮೇರಿಯಾ ಪ್ರದೇಶದ ಬಳಿ ಉಗ್ರರು ಕಾರ್ ಬಾಂಬ್ ಸ್ಫೋಟಿಸಿದ್ದು, ಘಟನೆಯಲ್ಲಿ ಹಲವಾರು ಅಂಗಡಿಗಳು ನಾಶಗೊಂಡಿವೆ. ಅಲ್ಲದೆ, ಹಲವು ನಾಗರೀಕರಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಕಟ್ಟಡಗಳೂ ನಾಶಗೊಂಡಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಸ್ಫೋಟ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಆಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದರು ಗಾಯಾಳುಗಳನ್ನು ಈಗಾಗಲೇ ರಕ್ಷಣೆ ಮಾಡಲಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ದಾಳಿ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ. ಆದರೆ, ಬಾಗ್ದಾದ್ ನಲ್ಲಿ ಈವರೆಗೂ ನಡೆದಿರುವ ಬಾಂಬ್ ಸ್ಫೋಟಗಳನ್ನು ಇಸಿಸ್ ಉಗ್ರ ಸಂಘಟನೆಯೇ ನಡೆಸಿರುವುದರಿಂದ ಸ್ಫೋಟವನ್ನು ಇದೇ ಸಂಘಟನೆಯೇ ದಾಳಿ ನಡೆಸಿರಬಹುದೆಂದು ಶಂಕಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


