ವಿದೇಶ

ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್

ಭಾರತೀಯ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಫೆ.22 ರಂದು ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿ ಪ್ರಮುಖ ವಿಷಯಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್
ಎಸ್. ಜೈಶಂಕರ್-
Published On :
ಬೀಜಿಂಗ್: ಭಾರತೀಯ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಫೆ.22 ರಂದು ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿ ಪ್ರಮುಖ ವಿಷಯಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 
ಬೀಜಿಂಗ್ ನಲ್ಲಿ ಉಭಯ ದೇಶದ ಪ್ರತಿನಿಧಿಗಳು ಮಾತುಕತೆ ನಡೆಸಿದ್ದು, ಎನ್ಎಸ್ ಜಿ ಹಾಗೂ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ಕುರಿತು ಮಹತ್ವದ ಮಾತುಕತೆ ನಡೆದಿರುವ ಸಾಧ್ಯತೆ ಇದೆ. ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡುವುದಕ್ಕೂ ಮುನ್ನ ಚೀನಾದ ವಿದೇಶಾಂಗ ಅಧಿಕಾರಿಗಳನ್ನು ಭೇಟಿ ಮಾಡಿ ಜೈಶಂಕರ್ ಮಾತುಕತೆ ನಡೆಸಿದ್ದರು. 
ಮಸೂದ್ ಅಜರ್ ಗೆ ವಿಶ್ವಸಂಸ್ಥೆ ಮೂಲಕ ನಿಷೇಧ ವಿಧಿಸುವ ವಿಚಾರದ ಬಗ್ಗೆ ಭಾರತದೊಂದಿಗೆ ಚರ್ಚೆ ನಡೆಸುವುದಕ್ಕೂ ಮುನ್ನ ಚೀನಾ ಪ್ರತಿಕ್ರಿಯೆ ನೀಡಿದ್ದು, ಭಾರತದ ಪ್ರಸ್ತಾವನೆಯನ್ನು ಬೆಂಬಲಿಸಲು ಮತ್ತಷ್ಟು ಸ್ಪಷ್ಟ ಸಾಕ್ಷಾಧಾರಗಳು ಅಗತ್ಯವಿದೆ ಎಂದು ಇಂದಿನ ಮಾತುಕತೆ ನಡೆಯುವುದಕ್ಕೂ ಮುನ್ನವೇ ಚೀನಾ ಹೇಳಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ಕುರಿತಾದ ಮಾತುಕತೆ ಕುತೂಹಲ ಮೂಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.