ಕರಾಚಿಯಿಂದ ಮದಿನಾಗೆ 7 ಪ್ರಯಾಣಿಕರನ್ನು ನಿಲ್ಲಿಸಿಕೊಂಡೆ ಕರೆದ್ಯೊಯ್ದ ಪಾಕ್ ವಿಮಾನ
ಪಾಕಿಸ್ತಾನ ವಿಮಾನದಲ್ಲಿ ನಿಗದಿತ ಪ್ರಯಾಣಿಕರಿಗಿಂತ ಹೆಚ್ಚು ಪ್ರಯಾಣಿಕರನ್ನು ನಿಲ್ಲಿಸಿಕೊಂಡು ಕರೆದೊಯ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ...

Published On :
ಇಸ್ಲಾಮಾಬಾದ್: ಪಾಕಿಸ್ತಾನ ವಿಮಾನದಲ್ಲಿ ನಿಗದಿತ ಪ್ರಯಾಣಿಕರಿಗಿಂತ ಹೆಚ್ಚು ಪ್ರಯಾಣಿಕರನ್ನು ನಿಲ್ಲಿಸಿಕೊಂಡು ಕರೆದೊಯ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಜನವರಿ 20ರಂದು ಬೋಯಿಂಗ್ 777 ವಿಮಾನ ಪಿಕೆ-743 ವಿಮಾನದಲ್ಲಿ ಕರಾಚಿಯಿಂದ ಮದಿನಾವರೆಗೆ ಅಂದರೆ ಮೂರು ಗಂಟೆ ಕಾಲ 7 ಮಂದಿ ಪ್ರಯಾಣಿಕರನ್ನು ನಿಲ್ಲಿಸಿಕೊಂಡೆ ಕರೆದೊಯ್ಯಲಾಗಿದೆ.
ಈ ವಿಮಾನದಲ್ಲಿ 409 ಮಂದಿ(ಜಂಪಿಂಗ್ ಸೀಟುಗಳು ಸೇರಿ) ಸಾಮರ್ಥ್ಯ ಹೊಂದಿದ್ದು 416 ಪ್ರಯಾಣಿಕರನ್ನು ಕರಾಚಿಯಿಂದ ಮದಿನಾಗೆ ಕರೆದೊಯ್ಯಲಾಗಿದೆ. ಈ ಹೆಚ್ಚುವರಿ ಪ್ರಯಾಣಿಕರಿಗೆ ನಕಲಿ ಟಿಕೆಟ್ ನೀಡಲಾಗಿದೆ.
ಈ ಪ್ರಕರಣ ಕುರಿತಂತೆ ಪಾಕಿಸ್ತಾನ ಏರ್ ಲೈನ್ಸ್ ನ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


