ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಹೆಚ್ ಡಬ್ಲ್ಯೂ ಬುಷ್ ಆಸ್ಪತ್ರೆಗೆ ದಾಖಲು
ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಹೆಚ್ ಡಬ್ಲ್ಯೂ ಬುಷ್ (ಜಾರ್ಜ್ ಬುಷ್ ಸೀನಿಯರ್) ಟೆಕ್ಸಾಸ್ ನಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published On :
ಹೌಸ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಹೆಚ್ ಡಬ್ಲ್ಯೂ ಬುಷ್ (ಜಾರ್ಜ್ ಬುಷ್ ಸೀನಿಯರ್) ಟೆಕ್ಸಾಸ್ ನಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಾರ್ಜ್ ಹೆಚ್ ಡಬ್ಲ್ಯೂ ಬುಷ್(92) ಆಸ್ಪತ್ರೆಗೆ ದಾಖಲಾಗಿರುವುದನ್ನು ಅವರ ಕಚೇರಿ ಸಿಬ್ಬಂದಿ ದೃಢಪಡಿಸಿದ್ದು, ಅನಾರೋಗ್ಯಕ್ಕೀಡಾಗಲು ಕಾರಣವೇನು ಎಂಬುದನ್ನು ತಿಳಿಸದೇ ಆರೋಗ್ಯ ಸ್ಥಿರವಾಗಿದೆ ಎಂದಷ್ಟೇ ಮಾಹಿತಿ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಾಧ್ಯಮವೊಂದರ ವರದಿಯ ಪ್ರಕಾರ ಜಾರ್ಜ್ ಬುಷ್ ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಜಾರ್ಜ್ ಬುಷ್ ಸೀನಿಯರ್ ಅಮೆರಿಕಾದ ಜೀವಂತವಿರುವ ಅತಿ ಹಿರಿಯ ಮಾಜಿ ಅಧ್ಯಕ್ಷರಾಗಿದ್ದಾರೆ. 2015 ರಲ್ಲಿ ಕತ್ತು ಮೂಳೆ ಮುರಿದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಪಾರ್ಕಿನ್‍ಸನ್ ಸಮಸ್ಯೆಯನ್ನು ಎದುರಿಸುತ್ತಿದ್ದು, ಓಡಾಡಲು ವೀಲ್ ಚೇರ್ ಮೇಲೆ ಅವಲಂಬಿತರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
hospitalizedಆಸ್ಪತ್ರೆಗೆ ದಾಖಲುGeorge H.W. BushFormer US Presidentಜಾರ್ಜ್ ಹೆಚ್ ಡಬ್ಲ್ಯೂ ಬುಷ್ಅಮೆರಿಕದ ಮಾಜಿ ಅಧ್ಯಕ್ಷ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


